20ರಂದು ಗೊರೂರಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಹಾಸನ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 3ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 20ರಂದು ತಾಲೂಕಿನ ಗೊರೂರು ಗ್ರಾಮದಲ್ಲಿ ನಡೆಸಲು ತಾಲೂಕು ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ ತೀರ್ಮಾನಿಸಿದೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಮುಂದಿನ ಕಾರ್ಯ ಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು ಎಂದು ಹಾಸನ ತಾಲೂಕು ಅಧ್ಯಕ್ಷ ಕೆ ಆರ್. ಮಮತೇಶ್ ತಿಳಿಸಿದ್ದಾರೆ.