ಮಾರ್ಚ್ನಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಸಕಲೇಶಪುರ: ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವು ಮುಂದಿನ ಮಾರ್ಚ್ ತಿಂಗಳಿನಲ್ಲಿ ಅದ್ದೂರಿಯಾಗಿ ನಡೆಸಲಾಗುವುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎಂ. ಮಂಜುನಾಥ್ ತಿಳಿಸಿದರು.
ಪಟ್ಟಣದ ಮಿನಿವಿದಾನ ಸೌಧ ಸಭಾಂಗಣದಲ್ಲಿ ಶಾಸಕ ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಸಂಘ ಸಂಸ್ಥೆಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.
ಮಾರ್ಚ್ ಎರಡನೇ ವಾರದಲ್ಲಿ ಪಟ್ಟಣದಲ್ಲಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು ಹಾಗೂ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ತಹಸಿಲ್ದಾರ್ ಪಾರ್ವತಿ, ಸಹಾಯಕ ಸಾರಿಗೆ ಅಧಿಖಾರಿ ಕೇಶವಧರಣಿ, ಎಪಿಎಂಸಿ ಅಧ್ಯಕ್ಷ ಸುಪ್ರದೀಪ್, ಪುರಸಭಾಧ್ಯಕ್ಷ ಸತೀಶ್,ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ರಕ್ಷಿದಿ, ಬಿ.ವಿ. ಜಯರಾಜ್, ಜಿಪಂ ಸದಸ್ಯೆ ಮಂಜಮ್ಮಾ ತಿಪ್ಪೇಸ್ವಾಮಿ, ತಾಲೂಕು ಪಂಚಾಯ್ತಿ, ಪುರಸಭೆ ಸದಸ್ಯರು, ನಾನಾ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಮುಖಂಡರು ಇದ್ದರು.