ಪಂಚಮುಖಿ ಆಂಜನೇಯಸ್ವಾಮಿ, ಗ್ರಾಮದೇವತೆಗಳ ಪ್ರತಿಷ್ಠಾಪನೆ
ಹಾಸನ: ತಾಲೂಕಿನ ಹನುಮಂತಪುರದಲ್ಲಿ 54 ಅಡಿ ಎತ್ತರದ ಶ್ರೀಪಂಚಮುಖಿ ಆಂಜನೇಯಸ್ವಾಮಿ ಹಾಗೂ ಗ್ರಾಮದೇವತೆಗಳ ಪ್ರತಿಷ್ಠಾಪನೆ ಹಾಗೂ ಉತ್ಸವ ಸಮಾರಂಭ ಭಾನುವಾರ ನಡೆಯಿತು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಸ್ಥರು ಒಕ್ಕಟ್ಟಾಗಿದ್ದರೆ ಏನನ್ನಾದರೂ ಸಾಧಿಸುತ್ತಾರೆ ಶ್ರೀಪಂಚಮುಖಿ ಆಂಜನೇಯಸ್ವಾಮಿಯ ಮೂರ್ತಿ ನಿರ್ಮಾಣವೇ ಆಗಿದೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಮಂಜುಳ ನಾಗೇಶ್, ಗ್ರಾಪಂ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಹಾಗೂ ಇತರರು ಇದ್ದರು.
ಆದಿಚುಂಚನಗಿರಿ ಮಠಕ್ಕೆ ಭೇಟಿ: ನಗರದ ಶ್ರೀಆದಿಚುಂಚನಗಿರಿ ಶಾಖಾ ಮಠಕ್ಕೆ ಭಾನುವಾರ ಭೇಟಿ ನೀಡಿದ್ದ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮಿಜಿಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಸನದ ಶಾಖಾ ಮಠಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು.