ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ರಾಮೇಶ್ವರ ದೇವಾಲಯ ಇಂದು ಲೋಕಾರ್ಪಣೆ

Srinivasa Murthy VN
Updated On : 10 Feb 2014, 11:48 am

ಹಾಸನ: ಹೊಳೆನರಸಿಪುರ ತಾಲೂಕು ಹಳ್ಳಿಮೈಸೂರು ಹೋಬಳಿ ಕಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ರಾಮೇಶ್ವರ ದೇವಸ್ಥಾನವನ್ನು ಫೆ. 12ರಂದು ಶ್ರೀಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ತೇಜೂರು ಮಠದ ಶ್ರೀ ಕಲ್ಯಾಣ ಸ್ವಾಮೀಜಿ ತಿಳಿಸಿದರು.
ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿದೇಶಿಕೇಂದ್ರಮಹಾಸ್ವಾಮೀಜಿ ದಿವ್ಯ ನೇತೃತ್ವ ವಹಿಸುವರು. ಸಿದ್ದಗಂಗಾ ಮಠದ ಅಧ್ಯಕ್ಷರು ಶ್ರೀ ಸಿದ್ದಲಿಂಗಸ್ವಾಮೀಜಿ ದಿವ್ಯ ಸಮ್ಮುಖ ವಹಿಸುವರು. ಶಿವಯೋಗಿ ಸಿದ್ದರಾಮೇಶ್ವರ ಮಠದ ಶ್ರೀ ಕಲ್ಯಾಣಸ್ವಾಮೀಜಿ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸುವರು.
ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯ ಎಚ್.ಡಿ. ದೇವೇಗೌಡ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರದ ಶಾಸಕ ಎ. ಮಂಜು ಅಧ್ಯಕ್ಷತೆ ವಹಿಸುವರು. ಹೊಳೆನರಸಿಪುರ ಕ್ಷೇತ್ರದ ಶಾಸಕ ರೇವಣ್ಣ, ವಿಧನ ಪರಿಷತ್ ಸದಸ್ಯ ಬಿ.ಬಿ. ಶಿವಪ್ಪ, ಕಾಂಗ್ರೆಸ್ ಮುಖಂಡರು ಅನುಪಮ ಮಹೇಶ್, ಸಿದ್ದಗಂಗಾ ಮಠದ ಪ್ರಾಧ್ಯಾಪಕ ವೀರಭದ್ರಯ್ಯ ಮುಂತಾದವರು ಭಾಗವಹಿಸುವರು. ಕಲಹಳ್ಳಿ ಗ್ರಾಮದಲ್ಲಿ ದೇವಾಲಯನ್ನು ನಿರ್ಮಾಣವಾಗಿರುವುದರಿಂದ ಈ ಗ್ರಾಮಕ್ಕೆ ಕಳೆ ತಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement