ಶಿಸ್ತು, ತಾಳ್ಮೆಯಿಂದ ಪರಿಶ್ರಮ ಪಟ್ಟರೆ ಪ್ರತಿಫಲ
ನುಗ್ಗೇಹಳ್ಳಿ (ಚನ್ನರಾಯಪಟ್ಟಣ ತಾ.): ವಿದ್ಯಾರ್ಥಿಗಳು ಶಿಸ್ತು, ತಾಳ್ಮೆಯಿಂದ ಪರಿಶ್ರಮ ಪಟ್ಟರೆ ಜೀವನದಲ್ಲಿ ಪ್ರತಿಫಲ ಸಿಗುತ್ತದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ತಾಲೂಕಿನ ಅಣತಿ ಗ್ರಾಮದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಶ್ರೀದಿಗಂಭರೇಶ್ವರ ಪದವಿ ಪೂರ್ವಕಾಲೇಜು ಹಾಗೂ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪಾಠಶಾಲೆಗಳ ಶಾಲಾ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಮನಸ್ಸು ಮುಗ್ಧವಾಗಿದ್ದು ಶಿಕ್ಷಕರು ಮಕ್ಕಳ ಮನಸ್ಸನ್ನು ಪರಿವರ್ತನೆ ಮಾಡಿ ಪ್ರೋತ್ಸಾಹಿಸಿದರೆ ಉನ್ನತ ವ್ಯಾಸಂಗ ಮಾಡಲು ಸಾದ್ಯವಾಗುತ್ತದೆ ಎಂದರು.
ಉತ್ತಮ ಆರೋಗ್ಯ: ಪ್ರತಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ತೋರ್ಪಡಿಸಲು ಶಿಕ್ಷಕರು ಅವಕಾಶ ಮಾಡಿಕೊಡಬೇಕು ಪ್ರತಿ ವರ್ಷ ವಾರ್ಷಿಕೋತ್ಸವ ನಡೆವುವಂತಾಗಬೇಕು ಆಗ ವಿದ್ಯಾರ್ಥಿಗಳು ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ ಕ್ರೀಡೆಯಲ್ಲಿ ಹೆಚ್ಚು ಭಾಗ ವಹಿಸುವುದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.
ಸಮಾರಂಭದಲ್ಲಿ ಜಿ.ಪಂ ಮಾಜಿ ಉಪಾಧ್ಯಕ್ಷ ಎ.ಇ. ಚಂದ್ರಶೇಖರ್, ಜೆಡಿಎಸ್ ತಾಲೂಕು ಅಧ್ಯಕ್ಷ ದೇವರಾಜೇಗೌಡ, ಜಿಪಂ ಅದಸ್ಯ ಶಿವಶಂಕರ ಕುಂಟೆ, ಎಪಿಎಂಸಿ ನಿರ್ದೇಶಕ ಶಿವಣ್ಣ, ತಾಪಂ ಸದಸ್ಯ ಎನ್. ಬಸವರಾಜು, ಚಂದ್ರಣ್ಣ, ಪ್ರಾಂಶುಪಾಲ ಮಂಜಪ್ಪ, ಶ್ರೀದಿಗಂಭರೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ನಾಗೇಶ್ ಇದ್ದರು.