ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಾನಾ ಹುದ್ದೆಗಳಿಗೆ ನಾಳೆ ಸಂದರ್ಶನ

Vishwanath S
Updated On : 13 Feb 2014, 1:24 am

ಹಾಸನ: ಹೆಸರಾಂತ ಕಂಪನಿಗಳು ನಾನಾ ಹುದ್ದೆಗಳ ನೇಮಕಾತಿಗಾಗಿ ಫೆ.14 ರಂದು  ಬೆಳಗ್ಗೆ 11ರಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಐ.ಟಿ.ಐ (ಫಿಟ್ಟರ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್ಸ್‌ನಲ್ಲಿ) ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುತ್ತಿದೆ.
ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು  ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.  
ಹೆಚ್ಚಿನ ಮಾಹಿತಿಗಾಗಿ ಜೆ.ಬಿ. ವಿಜಯಲಕ್ಷ್ಮಿ, ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು  ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 268374 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಲಾಗಿದೆ.
ಶಿಕ್ಷಕರಿಗೆ ರಜೆ ಸೌಲಭ್ಯ
ಹೊಳೆನರಸೀಪುರ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಫೆ. 14ರಿಂದ ಫೆ. 16ರವರೆಗೆ ಜರುಗಲಿರುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಬಯಸುವ ತಾಲೂಕಿನ ಶಿಕ್ಷಕರಿಗೆ ಅನ್ಯಕಾರ್ಯ ನಿಮಿತ್ತ ರಜೆಯ ಸೌಲಭ್ಯವನ್ನು ನೀಡಲಾಗುವುದು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್.ಕೆ. ಮಂಜುನಾಥ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ನಲಿ-ಕಲಿ, ಗುಣಾತ್ಮಕ ಶಿಕ್ಷಣ, ಶಿಕ್ಷಣದ ನೀತಿ, ಪಠ್ಯಕ್ರಮ, ಪಠ್ಯವಸ್ತು ಹಾಗೂ ಇನ್ನಿತರೆ ಶೈಕ್ಷಣಿಕ ವಿಷಯಗಳ ಬಗ್ಗೆ ಶಿಕ್ಷಣ ತಜ್ಞರಿಂದ ವಿಷಯ ಮಂಡನೆಯಾಗಲಿದೆ ಎಂದರು.
ಸಮ್ಮೇಳದಲ್ಲಿ ಭಾಗವಹಿಸುವ ಶಿಕ್ಷಕರು ಪ್ರತಿನಿಧಿ ಶುಲ್ಕವಾಗಿ ರು. 200 ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಅಥವಾ ನಿರ್ದೇಶಕರಲ್ಲಿ ಪಾವತಿಸಿ ರಸೀದಿ ಪಡೆಯುವುದಲ್ಲದೇ, ಪ್ರಯಾಣ ವೆಚ್ಚವನ್ನು ಸ್ವಂತ ಭರಿಸುವಂತೆ ಸಂಘದ ಅಧ್ಯಕ್ಷರಾದ ಎಚ್.ಕೆ. ಮಂಜುನಾಥ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement