ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

2ನೇ ದಿನಕ್ಕೆ ಪೌರ ಕಾರ್ಮಿಕರ ಧರಣಿ

Vishwanath S
Updated On : 14 Feb 2014, 11:23 am

ಹಾಸನ: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಸಿಐಟಿಯು ನೇತೃತ್ವದಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನದಲ್ಲಿ ಮುಂದುವರಿದಿದೆ.
ಗುತ್ತಿಗೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಗೊಳಿಸಿ, ಗುತ್ತಿಗೆ ಕಾರ್ಮಿಣಕರನ್ನು ಕಾಯಂಗೊಳಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಹಾಗೂ ರಾಜ್ಯ ಬಜೆಟ್‌ನಲ್ಲಿ  ಹಣ ಮೀಸಲಿರುಸುವಂತೆ ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯದ ಎಲ್ಲಾ ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳಲ್ಲಿ ಕಳೆದ 10-15 ವರ್ಷಗಳಿಂದ ಸಾವಿರಾರು ಜನರು ನೈರ್ಮಲ್ಯ, ಸ್ವಚ್ಛತೆ, ಲೋಡರ್, ಯುಜಿಡಿ ಕಾರ್ಮಿಕರು, ವಾಟರ್‌ಮ್ಯಾನ್, ಡ್ರೈವರ್, ಎಲೆಕ್ಟ್ರಿಷಿಯನ್ ಕಚೇರಿ ಸಹಾಯಕರಾಗಿ, ಕಂಪ್ಯೂಟರ್ ಆಪರೇಟರ್‌ಗಳಾಗಿ ದಿನಗೂಲಿ, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಾ ಬಂದಿದ್ದಾರೆ ಎಂದರು.
ಆದರೆ ಈ ಕಾರ್ಮಿಕರಿಗೆ ಉದ್ಯೋಗ ಭದ್ರತೆಯಿಲ್ಲದೆ, ಕಾರ್ಮಿಕ ಕಾನೂನುಗಳ ಪ್ರಯೋಜನವಿಲ್ಲದೆ. ಸಾಮಾಜಿಕ ಭದ್ರತೆಗಳಿಲ್ಲದೆ ಅತೀವ ಸಂಕಷ್ಟಮಯವಾದ ಜೀವನ ನಡೆಸುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಸಿಐಟಿಯು ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಘಟಿಸಿ ಅವರ ಹಕ್ಕುಗಳ ರಕ್ಷಣೆಗಾಗಿ ಸಂಘಟಿತ ಹೋರಾಟ ನಡೆಸಲಾಗುತ್ತಿದೆ. ಆದರೆ, ಸರ್ಕಾರಕ್ಕೆ ಕಾರ್ಮಿಕರ ಬಗ್ಗೆ ಕಾಳಜಿಯಿಲ್ಲ. ದಲಿತ ಹಾಗೂ ಹಿಂದುಳಿದ ಜಾತಿಗಳಿಗೆ ಸೇರಿರುವ ಇವರ ಏಳಿಗೆಗೆ ಗಮನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.   
ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಖಜಾಂಚಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಅರವಿಂದ್ ಮತ್ತತಿರರು ಪ್ರತಿಭಟನೆ ನೇತೃತ್ವ ವಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement