ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬುಡಕಟ್ಟು ಜನಾಂಗದ ಹಕ್ಕೊತ್ತಾಯಕ್ಕೆ ಆಗ್ರಹ

Vishwanath S
Updated On : 14 Feb 2014, 11:22 am

ಹಾಸನ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟದ ವತಿಯಿಂದ ನಮ್ಮ ನಡೆ ಎಂಬ ರಾಜ್ಯಮಟ್ಟದ ಕಾಲ್ನಡಿಗೆ ಜಾಥಾ ಬುಧವಾರ ನಡೆಯಿತು. ಇದರ ಅಂಗವಾಗಿ ಬುಧವಾರ ಕಾರ್ಯಕ್ರಮ ನಡೆಸಿದ ಒಕ್ಕೂಟದ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಬುಡಕಟ್ಟು ಜನಾಂಗದ ಹೂ ರಾಜ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 28 ಸಾವಿರ ಬುಡಕಟ್ಟು ಮಂದಿ ಇದ್ದು, ಮೂಲಭೂತ ಸೌಕರ್ಯ ಇಲ್ಲದ ಪ್ರದೇಶದಲ್ಲಿ ವಾಸ ಮಾಡುತ್ತಿದ್ದಾರೆ. ಬುಡಕಟ್ಟು ಜನಾಂಗದವರ ಅಭಿವೃದ್ಧಿಗೆ, ಉಚಿತ ಪೌಷ್ಟಿಕ ಆಹಾರ, 2006ರ ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು. ಈ ಜನಾಂಗದವರಿಗೆ ಮನೆ ಕಟ್ಟಲು ನೀಡಲಾಗುವ ವೆಚ್ಚವನ್ನು ಏರಿಸಬೇಕು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಶಿಕ್ಷಣದಿಂದ ಸಮಸ್ಯೆ ಪರಿಹಾರ: ಈ ಸಂದರ್ಭದಲ್ಲಿ ಬುಡಕಟ್ಟು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣವರ ಮಾತನಾಡಿ, ಜನಾಂಗ ಕೇವಲ ಒಂದು ದಿನದ ಬದುಕಿಗೆ ಮಾತ್ರ ಸೀಮಿತವಾಗಿರುವುದರಿಂದ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದ್ದಾರೆ. ಬುಡಕಟ್ಟು ಸಮುದಾಯ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಸಮಾಜದಲ್ಲಿ ಸಿಗಬೇಕಾದ ಸೌಲಭ್ಯಗಳಿಗಾಗಿ ಇಂದು ಹೋರಾಟ ಅನಿವಾರ್ಯವಾಗಿದೆ. ಇಂದು ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣವೇ ಅಂತಿಮವಾಗಿದ್ದು, ಬುಡಕಟ್ಟು ಜನಾಂಗ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಮೂಲಕ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಸ್ಯೆ ಸೇರಿದಂತೆ ಎಲ್ಲಾ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.
ಕೃಷಿಗೆ ಅನುಕೂಲ: ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್ ಮಾತನಾಡಿ, ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಗಡಿಹಳ್ಳಿಯಲ್ಲಿ ವಾಸವಾಗಿರುವ ಬುಡಕಟ್ಟು ಜನಾಂಗ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಕ್ರಿಯೆ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಅರಣ್ಯ ಕಾಯ್ದೆಯಡಿ ಬುಡಕಟ್ಟು ಜನಾಂಗದವರಿಗೆ ಭೂಮಿ ನೀಡಲು ಜಿಲ್ಲಾಧಿಕಾರಿ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗುತ್ತಿದ್ದು, ಈ ಭೂಮಿಯಲ್ಲಿ ಕೃಷಿ ಚಟುವಟಿಕೆಗಳು ನಡೆಸಲು ಸಹಕಾರಿಯಾಗುವಂತೆ ಅನುಕೂಲ ಮಾಡಿಕೊಡಲಾಗುವುದು.
ಕಾರ್ಯಕ್ರಮದಲ್ಲಿ ಬುಡಕಟ್ಟು ಸಮುದಾಯದ ಪುಷ್ಪ, ಲಕ್ಷ್ಮಿ, ದಲಿತ ಮುಖಂಡರಾದ ರವಿ, ವಿಜಯ್ ಕುಮಾರ್, ಮರಿ ಜೋಸೆಫ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement