ಲೋಕಾಯುಕ್ತ ಬಲೆಗೆ ಬಿದ್ದ ಪ್ರಥಮ ದರ್ಜೆ ಗುಮಾಸ್ತ
ಹಾಸನ: ನಗರದ ಹಾಸನ ವಿಮಾ ಅಧಿಕಾರಿಗಳ ಕಚೇರಿಯ ಪ್ರಥಮ ದರ್ಜೆ ಗುಮಾಸ್ತ ರುದ್ರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ಅಹಮ್ಮದ್ ಅಲಿ ಎಂಬುವರ ಬೋನಸ್ ಹಣವನ್ನು ಬಿಡುಗಡೆ ಮಾಡುವುದಕ್ಕೆ 700 ರು.ಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ಅಹಮ್ಮದ್ ಅವರು 300 ರು.ಗಳನ್ನು ಕೊಟ್ಟಿದ್ದರು. ಈ ಬಗ್ಗೆ ಅಹಮ್ಮದ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮವಾರ ಉಳಿಕೆ 400 ರು.ಗಳನ್ನು ಪಡೆಯುವಾಗ ರುದ್ರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಎಸ್ಪಿ ವೇದಮೂರ್ತಿ ಅವರು, ರುದ್ರೇಗೌಡನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.