ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಹಾಸನ: ಅರಸೀಕೆರೆ ತಾಲ್ಲೂಕಿನಲ್ಲಿ ಖಾಲಿ ಇರುವ ಸೈದರಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮತ್ತು ಮೈಲನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಮರುಪ್ರಕಟಣೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಫೆ. 20 ಕೊನೆ ದಿನ. ನೀರುಗುಂದ ಅಂಗನವಾಡಿ ಕೇಂದ್ರಕ್ಕೆ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಕಟಣೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಮಾ. 2 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅರಸೀಕೆರೆ, ಇವರನ್ನು ಸಂಪರ್ಕಿಸಲು ಕೋರಿದೆ.