ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಮಹಿಳಾ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ'

Rashmi Kasaragodu
Updated On : 19 Feb 2014, 1:13 am

ಅರಕಲಗೂಡು: ಕೌಟುಂಬಿಕ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಾಯಿದೆಗಳು ಸಹಕಾರಿಯಾಗಿದ್ದು,ಈ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ ಕಾನೂನಿನ ತಿಳುವಳಿಕೆ ನೀಡುವುದು ಅತ್ಯವಶ್ಯಕವಾಗಿದೆ ಎಂದು ಸರ್ಕಾರಿ ಅಭಿಯೋಜಕ ಕೆ.ಎಸ್. ನಾಗೇಂದ್ರ ತಿಳಿಸಿದರು.
ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಹಿಳೆಯರಿಗೆ ಹಮ್ಮಿಕೊಳ್ಳಲಾಗಿದ್ದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾನೂನು ಇಲಾಖೆ ಇತರೆ ಇಲಾಖೆಗಳು, ಸಂಘ ಸಂಸ್ಥೆಗಳೊಂದಿಗೆ ಸೇರಿ ಕಾನೂನಿನ ತಿಳುವಳಿಕೆ ನೀಡುವ ಕುರಿತು ಉಚಿತವಾಗಿ ಶಿಬಿರಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ಅಲ್ಲದೇ, ನ್ಯಾಯಾಲಯದಲ್ಲಿಯೂ ಕೂಡ ಪ್ರತ್ಯೇಕವಾಗಿ ಕೇಂದ್ರ ತೆರೆದು ಕೆಲವು ಪ್ರಕರಣಗಳ ಬಗ್ಗೆ ಕಾನೂನಿನ ನೆರವು, ಸಲಹೆ ಕೂಡ ಒದಗಿಸುತ್ತಿದೆ. ಇದರ ಪ್ರಯೋಜನವನ್ನು ಮಹಿಳೆಯರು ಸೇರಿದಂತೆ ಇತರರು ಪಡೆದುಕೊಳ್ಳುವತ್ತ ಮುಂದಾಗಬೇಕೆಂದು ಸಲಹೆ ಮಾಡಿದರು.
ಪರಿಹಾರ ಕಂಡುಕೊಳ್ಳಿ: ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಕಾನೂನಿನ ಅರಿವಿಲ್ಲದೇ ಉಲ್ಬಣಗೊಳ್ಳುತ್ತಿವೆ. ಮಹಿಳೆಯರು, ಪುರುಷರಿಗೆ ಸಮಾಜದಲ್ಲಿ ಸಮಾನವಾದ ಮೂಲಭೂತ ಹಕ್ಕುಗಳ ಜತೆಗೆ ರಕ್ಷಣೆ ಕೂಡ ಇರುವುದರಿಂದ ಯಾವುದೇ ಒತ್ತಡಕ್ಕೆ ಮಣಿಯದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಅವರು ತಿಳಿಸಿದರು.
ಸಿಡಿಪಿಒ ಮಲ್ಲೇಗೌಡ, ವಕೀಲರ ಸಂಘದ ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಮಹೇಶ್ ಮಾತನಾಡಿದರು. ವಕೀಲರಾದ ನಂಜುಂಡೇಗೌಡ, ಶಂಕರಯ್ಯ, ಚಲುವೇಗೌಡ, ಗಿರೀಶ್ ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಹಾಯಕಿಯರು,ಮಹಿಳೆಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement