22ರಂದು ಕೃಷಿ ಮಾಹಿತಿ ಆಂದೋಲನ
ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಕೃಷಿ ಇಲಾಖೆ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಆಶ್ರಯದಲ್ಲಿ ಜಿಲ್ಲಾ ಕೃಷಿ ಮಾಹಿತಿ ಆಂದೋಲನ, ಪ್ರಗತಿ ಪರ ರೈತರ ಸಮಾವೇಶ ಮತ್ತು ಕಿರು ಧಾನ್ಯಗಳ ಮೇಳ-2014 ಕಾರ್ಯಕ್ರಮ ಫೆ. 22ರಂದು ಬೆಳಗ್ಗೆ 10.30ಕ್ಕೆ ಕಾರೆಕೆರೆಯ ಕೃಷಿ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ.
ಮಾಜಿ ಪ್ರಧಾನಿ ಹಾಗೂ ಲೋಕಸಭೆ ಸದಸ್ಯ ಹೆಚ್.ಡಿ. ದೇವೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಕೃಷಿ ವಸ್ತುಪ್ರದರ್ಶನ ಉದ್ಘಾಟಿಸುವರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಣ್ಣ, ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದ ಉದ್ಘಾಟನೆ ನೆರವೇರಿಸುವರು. ಶಾಸಕ ಹೆಚ್.ಡಿ. ರೇವಣ್ಣ ಅಧ್ಯಕ್ಷತೆ ವಹಿಸುವರು.
ಶಾಸಕರಾದ ಹೆಚ್.ಎಸ್. ಪ್ರಕಾಶ್, ಹೆಚ್.ಕೆ. ಕುಮಾರಸ್ವಾಮಿ, ವೈ.ಎನ್. ರುದ್ರೇಶಗೌಡ, ಎ. ಮಂಜು, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಪಟೇಲ್ ಶಿವರಾಂ, ಬಿ.ಬಿ. ಶಿವಪ್ಪ, ಮರಿತಿಬ್ಬೇಗೌಡ, ಗೋ. ಮಧುಸೂದನ್, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಕೆ. ನಾರಾಯಣಗೌಡ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಡಿ.ರತ್ನ ಹನುಮೇಗೌಡ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕೃಷ್ಣೇಗೌಡ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎ.ನಂಜುಂಡಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕೃಷಿ ಇಲಾಖೆ ಆಯುಕ್ತ ಸುಬೋಧ್ ಯಾದವ್, ಕೃಷಿ ಇಲಾಖೆ ನಿರ್ದೇಶಕ ಡಾ.ಬಿ.ಕೆ. ಧರ್ಮರಾಜನ್, ಜಲಾನಯನ ಇಲಾಖೆ ಆಯುಕ್ತ ಹೆಚ್.ಜಿ. ಶಿವಾನಂದಮೂರ್ತಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.