ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮೋದಿ ಪರ ಅಭಿಪ್ರಾಯ ಸಂಗ್ರಹ

Rashmi Kasaragodu
Updated On : 20 Feb 2014, 2:10 am

ಅರಸೀಕೆರೆ: ಭಾರತದ ಸಮಗ್ರತೆ ಮತ್ತು ಐಕ್ಯತೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭವಿಷ್ಯದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಬೆಂಬಲಿಸುವ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಘಟಕದ ಕಾರ್ಯಕರ್ತರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಚುನಾವಣಾ ಪೂರ್ವ ಅಭಿಪ್ರಾಯ ಸಂಗ್ರಹ ಮಾಡಿದರು.
ನರೇಂದ್ರ ಮೋದಿಯವರನ್ನು ಬೆಂಬಲಿಸುವವರು ಸ್ವಯಂಪ್ರೇರಿತವಾಗಿ ಮತ ಚಲಾಯಿಸುವಂತೆ ಪ್ರಚಾರ ನಡೆಸಿ ಮತ ಪೆಟ್ಟಿಗೆಯಲ್ಲಿ ಮತ ಹಾಕುವಂತೆ ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ವಕ್ತಾರ ಎನ್.ಡಿ. ಪ್ರಸಾದ್ ಮತ ಚಲಾಯಿಸಿ ಮಾತನಾಡಿ, ಇದೊಂದು ಚುನಾವಣಾ ಪೂರ್ವ ಅಭಿಪ್ರಾಯ ಸಂಗ್ರಹಣೆ ಪ್ರಕ್ರಿಯೆಯಾಗಿದ್ದು ದೇಶದಾದ್ಯಂತ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪಟ್ಟಣದ ವಿವಿಧೆಡೆ ಸಾಂಕೇತಿಕ ಮತಕೇಂದ್ರಗಳನ್ನು ತೆರೆದು ಮೋದಿಪರ ಅಭಿಪ್ರಾಯ ಸಂಗ್ರಹಣೆ ಮಾಡುವ ವಿನೂತನ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಹರಳಕಟ್ಟ ರಮೇಶ್, ನಗರಾಧ್ಯಕ್ಷ ಹಿರಿಯಣ್ಣ, ಮುಖಂಡರಾದ ಮನೋಜ್, ಜಿ.ಜಿ. ಲೋಕೇಶ್, ವಕೀಲರಾದ ಪ್ರಕಾಶ್, ಯತೀಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement