ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸರ್ಕಾರದ ನೀತಿ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Rashmi Kasaragodu
Updated On : 20 Feb 2014, 2:07 am

ಹಾಸನ: ಹಿಂದುಳಿದ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳ ಹಕ್ಕುಚ್ಯುತಿ ಮಾಡಿರುವ ಸರ್ಕಾರದ ನೀತಿಯನ್ನು ಖಂಡಿಸಿ ನಾನಾ ವಿದ್ಯಾರ್ಥಿಗಳ ಸಂಘಟನೆಗಳು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದವು.
ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ), ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತ್ಯೇಕವಾಗಿ ನಗರದ ಹೇಮಾವತಿ ಪ್ರತಿಮೆಯಿಂದೆ ಬೃಹತ್ ಮೆರವಣಿಗೆ ನಡೆಸಿ ಎನ್.ಆರ್. ವೃತ್ತ, ಬಿ.ಎಂ.ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಧರಣಿ ನಡಸಿದರು. ನಂತರ, ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಎಸ್ಎಫ್ಐ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.


ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ
ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಯನ್ನು ಕೈಗೊಂಡಿರುವುದನ್ನು ಕೈಬಿಡುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹೊಸ ಕಾಯ್ದೆಯನ್ನು ತಂದು ವಿದ್ಯಾರ್ಥಿಗಳನ್ನು ಶುಲ್ಕ ವಿನಾಯಿತಿಯಿಂದ ದೂರವಿಡುವ ಪ್ರಯತ್ನವನ್ನು ಮಾಡುತ್ತಿರುವುದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗಿದೆ. ವಿದ್ಯಾರ್ಥಿಗಳು ಶುಲ್ಕ ವಿನಾಯಿತಿ ಪಡೆಯಬೇಕಾದರೆ ಅವರು ಯಾವುದೇ ಪ್ರತಿಭಟನೆಯಲ್ಲಿ ಭಾಗಿಯಾಗಿರಬಾರದು ಮತ್ತು ಯಾವುದೇ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು ಎಂಬ ನೀತಿಯನ್ನು ಕಾಯ್ದೆಯಲ್ಲಿ ಉಲ್ಲೇಖಿಸಿರುವುದರಿಂದ ಇದನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಮಹಮ್ಮದ್ ಇರ್ಷಾದ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement