ಪ್ರತಿಭಾ ಪುರಸ್ಕಾರ
ಹಾಸನ: ಅಖಿಲ ಭಾರತ ವೀರಶೈವ ಮಹಾಸಭಾದಿಂದ ಫೆ. 23 ರಂದು ಬೆಳಗ್ಗೆ 10 ಕ್ಕೆ ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ ಜವೇನಹಳ್ಳಿ ಮಠದ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸಮರ್ಪಣ ಏರ್ಪಡಿಸಲಾಗಿದೆ.
ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ಕೋರಿದ್ದಾರೆ.