ಇಂದು ಅರಸೀಕೆರೆ ಬಂದ್
ಅರಸೀಕೆರೆ: ಕಳೆದ 5 ದಿನಗಳಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಹಾಗೂ ಸರ್ಕಾರ ಸ್ಪಂದಿಸದ ಕಾರಣ ಫೆ. 22ರಂದು ಅರಸೀಕೆರೆ ಬಂದ್‌ಗೆ ಕರೆ ನೀಡಲಾಗಿದ್ದು ರೈತರು, ಸಾರ್ವಜನಿಕರು, ವ್ಯಾಪಾರಸ್ಥರು, ವಿದ್ಯಾರ್ಥಿಗಳು ಸಹಕಾರ ನೀಡಬೇಕೆಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜ್ ಮಾತನಾಡಿ, ಮನವಿ ಮಾಡಿದರು. ಈಗ ಪರೀಕ್ಷಾ ಸಮಯವಾಗಿರುವುದರಿಂದ ಶಾಲಾ- ಕಾಲೇಜುಗಳು ಹಾಗೂ ವಿದ್ಯಾರ್ಥಿಗಳು ಬಂದು ಹೋಗಲು ಅನುಕೂಲವಾಗುವಂತೆ ಬಸ್ ಸಂಚಾರ ವ್ಯವಸ್ಥೆ ಎಂದಿನಂತೆ ಇರಲಿದ್ದು ಈ ಬಂದ್ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.