ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಗ್ರಾಮೀಣ ಜನರಲ್ಲಿ ಅರಿವು ಮೂಡಿಸಿ'

Rashmi Kasaragodu
Updated On : 22 Feb 2014, 1:31 am

ಹಾಸನ: ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ಹನುಮಂತಪುರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಕೋಮಲ ಚನ್ನೇಗೌಡ ನುಡಿದರು.
ತಾಲ್ಲೂಕಿನ ಸಮುದ್ರವಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್‌ಎಸ್‌ಎಸ್ ಎಸ್ ಸ್ವಯಂ ಸೇವಕರು ಗ್ರಾಮೀಣ ಜನರಿಗೆ ಸ್ವಚ್ಛ ಶೌಚಾಲಯಗಳ ಬಳಕೆ, ಪರಿಸರ ಸಂರಕ್ಷಣೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು. ಹಳ್ಳಿ ಜನರು ಎನ್‌ಎಸ್‌ಎಸ್ ಶಿಬಿರದಿಂದ ಆಗುವ ಉಪಯೋಗವನ್ನು ಬಳಕೆ ಮಾಡಿಕೊಳ್ಳಬೇಕು ಎಂದರು.
ಉತ್ತಮ ಪ್ರಜೆಗಳಾಗಬೇಕು: ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಎಂ.ಕೆ. ಮಹೇಶ್, ಗಾಂಧೀಜಿ ಅವರ ಗ್ರಾಮಸ್ವರಾಜ್ಯದ ಕಲ್ಪನೆ ಕುಸಾಗಿ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ಗ್ರಾಮಗಳಲ್ಲಿ ವಿದ್ಯಾರ್ಥಿಗಳು ಉಳಿದು ಇಲ್ಲಿಯ ಸೇವೆ ಮಾಡುವ ಮೂಲಕ ಹಳ್ಳಿಯ ಜನ ಜೀವನ ಅರಿಯಬೇಕು ಎಂದು ನುಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್‌ರಾಜ್ ಚಂದನ್, ಇಂದಿನ ಯುವಕರು ಹಳ್ಳಿಯ ಜೀವನವನ್ನು ಅರಿತು ಕೊಳ್ಳಬೇಕಾದ ಅಗತ್ಯತೆ ಇದ್ದು, ಹಳ್ಳಿಯ ಜನರ ಭಾವನೆಗಳನ್ನು ಅರ್ಥೈಸಿಕೊಳ್ಳಲು ಇಂತಹ ಶಿಬಿರಗಳ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಜೀವನದಲ್ಲಿ ಶಿಸ್ತು, ಸಂಯಮ ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯ್ತಿ ಸದಸ್ಯ ಗಿಡ್ಡೇಗೌಡ, ಮಾಜಿ ಸದಸ್ಯ ಚನ್ನೇಗೌಡ, ಗ್ರಾಮಸ್ಥರಾದ ರಾಮೇಗೌಡ, ದಾಸೇಗೌಡ, ಅಧ್ಯಾಪಕ ಪ್ರೊ. ಗುರುರಾಜ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎ. ಪ್ರಕಾಶ್, ಉಪನ್ಯಾಸಕ ಎಚ್.ಕೆ. ದಿಲೀಪ್ ಕುಮಾರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement