ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಭಾರತ್ ನಿರ್ಮಾಣ್‌' ಕಾರ್ಯಕ್ರಮ ಉಪಯುಕ್ತ

Rashmi Kasaragodu
Updated On : 22 Feb 2014, 1:28 am

ಅರಕಲಗೂಡು: ಗ್ರಾಮೀಣ ಮತ್ತು ಪಟ್ಟಣಗಳ ನಡುವಿನ ಅಂತರವನ್ನು ಕಡಿಮೆ ಮಾಡುವ  ನಿಟ್ಟಿನಲ್ಲಿ ಭಾರತ್ ನಿರ್ಮಾಣ್ ಕಾರ್ಯಕ್ರಮವು ಉಪಯುಕ್ತವಾಗಿದೆ ಎಂದು ತಾಲೂಕಿನ  ಹಂಡ್ರಂಗಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ನಟರಾಜ್ ಅಭಿಪ್ರಾಯಪಟ್ಟರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೆಶನಾಲಯ, ಶಿಶು ಅಭಿವೃದ್ಧಿ ಯೋಜನೆ, ಅರಕಲಗೂಡು,  ಗ್ರಾಮ ಪಂಚಾಯ್ತಿ, ಹಂಡ್ರಂಗಿ, ಸಿ.ಎಂ. ಎಸ್.ಎಸ್ ಸೇವಾ ಸಂಸ್ಥೆ, ಕೊಣನೂರು ಆಶ್ರಯದಲ್ಲಿ ಇತ್ತೀಚೆಗೆ ತಾಲೂಕಿನ ಕೆಸವತ್ತೂರು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಭಾರತ್ ನಿರ್ಮಾಣ್ ಕೇಂದ್ರ ಸರ್ಕಾರದ ಯೋಜನೆ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಯೋಜನೆಗಳಾದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ,  ಸರ್ವಶಿಕ್ಷ ಅಭಿಯಾನ, ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮ, ಪ್ರಧಾನ ಮಂತ್ರಿಗಳ  ಗ್ರಾಮ ಸಡಕ್ ಯೋಜನೆ, ಆಹಾರ ಭದ್ರತೆ, ಭೂಸ್ವಾಧೀನ ಕಾಯ್ದೆ, ಮಾಹಿತಿ ಹಕ್ಕು  ಕಾಯ್ದೆ, ನೇರ ನಗದು ವರ್ಗಾವಣೆ ಇವೇ ಮುಂತಾದ ಯೋಜನೆಗಳ ಕುರಿತು ವಿವರಿಸಿದರು.
ಗ್ರಾಮೀಣ ಭಾಗದ ಜನರು ಇನ್ನೂ ಬಯಲು ಶೌಚಾಲಯವನ್ನೇ ಅವಲಂಬಿಸಿದ್ದು, ನಿರ್ಮಲ್ ಭಾರತ್ ಅಭಿಯಾನ ದಡಿಯಲ್ಲಿ ಗ್ರಾಮೀಣ ಭಾಗದ ಜನರು ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಪಂಚಾಯಿತಿಯಿಂದ ಸಹಾಯಧನ ನೀಡುವುದರಿಂದ ಗ್ರಾಮೀಣ ಭಾಗದ ಪ್ರತಿ ಕುಟುಂಬಗಳು ಶೌಚಾಲಯವನ್ನು ಹೊಂದಬೇಕು. ಬಯಲುಮುಕ್ತ ಶೌಚಾಲಯ ನಿರ್ಮಾಣ ಮಾಡಲು ಜನತೆ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದರು.
ವಿವರಣೆ: ತಾಲೂಕು ಪಂಚಾಯ್ತಿ ಎಂ.ಐ.ಎಸ್. ಸಂಯೋಜಕ ಆರ್.ಟಿ. ಮಂಜುನಾಥ್ ಮಾತನಾಡಿ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸಲು 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಪ್ರತಿಯೊಂದು ಗ್ರಾಮ ಪಂಚಾಯ್ತಿಯಲ್ಲೂ ದೊರೆಯುತ್ತಿರುವ ಸೌಲಭ್ಯಗಳ ಕುರಿತು ವಿವರಿಸಿದರು.
ಸಲಹೆ: ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಮತ್ತು ಪರೀಕ್ಷಾ ನೈರ್ಮಲ್ಯದ ತಾಲೂಕು  ಸಂಯೋಜಕ ಟಿ. ಮಂಜುನಾಥ್ ಮಾತನಾಡಿ, ಗ್ರಾಮೀಣ ಜನತೆಗೆ ಅಗತ್ಯ ಪ್ರಮಾಣದಲ್ಲಿ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ಬಗ್ಗೆ ವಿವರಿಸಿ ಆರೋಗ್ಯ ರಕ್ಷಿಸಿಕೊಳ್ಳುವಂತೆ ಸಲಹೆ ನೀಡಿದರು.
ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಮಂಜುಳ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳೆಯರಿ ಗಾಗಿ ದೊರೆಯುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಪ್ರಾರಂಭದಲ್ಲಿ ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಕಾರ್ಯಕ್ರಮವನ್ನು ಹಂಡ್ರಂಗಿ ಗ್ರಾಮ ಪಂಚಾಯ್ತಿಯ ಉಪಾಧ್ಯಕ್ಷ ಲಿಂಗರಾಜಪ್ಪ ಉದ್ಘಾಟಿಸಿದರು.  ಗ್ರಾಮದ ಮುಖಂಡ ಆನಂದ, ಶಿಕ್ಷಕರಾದ ಎಸ್.ಕೆ. ಶಿವಶಂಕರ್, ಜಿ. ಪುಷ್ಪ, ಪಂಕಜಾಕ್ಷಿ, ಗಿರಿಜ, ಅಚ್ಯುತ ಮತ್ತಿತರರು ಹಾಜರಿದ್ದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಿ.ಎಂ.ಎಸ್. ಸೇವಾ ಸಂಸ್ಥೆಯ ಶಶಿಕಲಾ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ ವಂದಿಸಿದರು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement