ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶಾಲಾ ಹಂತದಲ್ಲಿ ಸಾಮಾಜಿಕ ಜವಾಬ್ದಾರಿ ಮೂಡಿಸಿ: ತಿಮ್ಮಕ್ಕ

Rashmi Kasaragodu
Updated On : 22 Feb 2014, 1:30 am

ಹಾಸನ: ಶಾಲಾ ಹಂತದಲ್ಲೇ ಮಕ್ಕಳಿಗೆ ಪರಿಸರ ಕಾಳಜಿ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಮೂಡಿಸಬೇಕು ಎಂದು ಸಾಲು ಮರದ ತಿಮ್ಮಕ್ಕ  ತಿಳಿಸಿದರು.
ಅವರು ನಗರದ ದಿ ಸ್ಕಾಲರ್ಸ್ ವರ್ಲ್ಡ್ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಪ್ರತಿಫಲಾಪೇಕ್ಷೆಯಿಲ್ಲದೆ ತಾವು ನಿಸ್ವಾರ್ಥವಾಗಿ ಸಸಿಗಳನ್ನು ನೆಟ್ಟು ಹೆಮ್ಮರಗಳನ್ನಾಗಿ ಬೆಳೆಸಿದ ಅನುಭವಗಳನ್ನು ಹಂಚಿಕೊಂಡರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಜನಾರ್ಧನ್ ಅವರು ಒತ್ತಡದ ಶಿಕ್ಷಣ ಥರವಲ್ಲ ಎಂದರು. ಪುಟ್ಟು ಎಜುಕೇಶನ್ ಟ್ರಸ್ಟ್‌ನ ಲಕ್ಷ್ಮಿ ನಾಗರಾಜು ಹಾಗೂ ಶಾಲೆಯ ಮಕ್ಕಳು ತಿಮ್ಮಕ್ಕ ಅವರನ್ನು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ನೆನಪಿಗಾಗಿ ಕನ್ನಡ  ಸಾಹಿತ್ಯ ಪರಿಷತ್ ಭವನದ ಆವರಣದಲ್ಲಿ ಸಸಿ ನೆಡಲಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಸಂಸ್ಥೆ ಕಾರ್ಯದರ್ಶಿ ಹೆಚ್.ಎನ್. ಚಂದ್ರಶೇಖರ್ ಉಪಸ್ಥಿತರಿದ್ದರು. ಹೆಚ್. ರವೀಶ್ ಹಾಗೂ ರುಕಿಯ ಕಾರ್ಯಕ್ರಮ ನಿರೂಪಿಸಿದರು. ಶೋಭ ಹಾಗೂ ದರ್ಶಿನಿ ವಂದಿಸಿದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement