ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಾನಪದ ಗೀತಗಾಯನ ಸ್ಪರ್ಧೆ

Mainashree
Updated On : 23 Feb 2014, 10:51 am

ಹೊಳೆನರಸೀಪುರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ರೋಟರಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ತಾಲೂಕಿನ ಹಳೆಕೋಟೆ ಪ್ರೌಢಶಾಲೆಯಲ್ಲಿನ ಮಕ್ಕಳಿಗಾಗಿ ಜಾನಪದ ಗೀತೆ ಗಾಯನ ಸ್ಪರ್ಧೆ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಸ್.ಪುಟ್ಟಸೋಮಪ್ಪ ಮಾತನಾಡಿ, ಮನೆ-ಮನೆ ಕವಿಗೋಷ್ಠಿಯನ್ನು ಕೇವಲ ನಗರ ಪ್ರದೇಶದ ಮನೆಗಳಲ್ಲಿ ಮಾತ್ರವಲ್ಲದೇ ಗ್ರಾಮಾಂತರ ಪ್ರದೇಶಗಳಾದ ಎಲೆಚಾಗಹಳ್ಳಿ ಹಾಗೂ ಪ್ರಸ್ತುತ ಹಳೆಕೋಟೆಯಲ್ಲಿ ನಡೆಸುತ್ತಿದ್ದು, ಈಗಾಗಲೇ ಇಲ್ಲಿಯವರೆಗೆ ಏಳು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸ ಏರ್ಪಡಿಸಲಾಗಿದ್ದು, ಎಂಟನೆಯ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ  ಡಾ. ಚಂದ್ರಶೇಖರ್ ಕಂಬಾರರ ಬಗ್ಗೆ ರೋಟರಿ ಬಾಲಭವನದಲ್ಲಿ ನಡೆಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಜವರಯ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ರೊ. ಆರ್.ಬಿ.ಪುಟ್ಟೇಗೌಡ, ಸ್ಪರ್ಧಿಗಳಿಗೆ ಬಹುಮಾನ ನೀಡಿದರು. ರೊ. ಎನ್.ಆರ್. ವಿಜಯಕುಮಾರ್, ಶಾಲೆಯ ಮುಖ್ಯೋಪಾಧ್ಯಾಯಿನಿ ಎಂ.ಕೆ. ಕಾಂತ ಇದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್‌ಕಾರ್ನಾಡ್‌ರವರ ಬಗ್ಗೆ ಉಪನ್ಯಾಸವನ್ನು ಕುಮಾರ್  ನೀಡಿದರು. ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ 10 ನೆ ತರಗತಿಯ ಗಿರೀಶ್ ಪ್ರಥಮ, 9ನೇ ತರಗತಿಯ ಕಿರಣ್ ದ್ವಿತೀಯ, 8ನೇ ತರಗತಿಯ ನಿವೇದಿತಾ ತೃತೀಯ ಬಹುಮಾನ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement