ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪಲ್ಸ್ ಪೋಲಿಯೋ ಯಶಸ್ವಿ ಅನುಷ್ಠಾನ

Mainashree
Updated On : 23 Feb 2014, 9:34 am

ಹಾಸನ: ಜಿಲ್ಲೆಯಾದ್ಯಂತ ಭಾನುವಾರ ಎರಡನೇ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಂಡಿತು.
ನಗರದ ಜಿಲ್ಲಾಸ್ಪತ್ರೆಯಲ್ಲಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಮಕ್ಕಳಿಗೆ ಲಿಸಿಕೆ ಹಾಕುವ ಮೂಲಕ ಎರಡನೇ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ, ಸಾರ್ವಜನಿಕರು ತಮ್ಮ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಪೋಲಿಯೋ ಮುಕ್ತರನ್ನಾಗಿ ಮಾಡಬೇಕು. ಜನವರಿಯಲ್ಲಿ ನಡೆದ ಮೊದಲ ಹಂತದ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅದೇ ರೀತಿ ಎರಡನೇ ಹಂತದ ಲಸಿಕಾ ಕಾರ್ಯಕ್ರಮವು ಯಾವುದೇ ಲೋಪವಿಲ್ಲದಂತೆ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಕಿವಿಮಾತು: ಈಗಾಗಲೇ ನಮ್ಮ ದೇಶ ಪೊಲಿಯೋ ಮುಕ್ತ ರಾಷ್ಟ್ರಗಳ ಸಾಲಿಗೆ ಸೇರಿರುವುದು ಸಂತೋಷ ತಂದಿದೆ. ಪೋಲಿಯೋ ಮುಕ್ತ ದೇಶ ಎಂಬ ಹೆಸರಿಗೆ ಪಾತ್ರವಾದರೂ ಇನ್ನಷ್ಟು ವರ್ಷಗಳು ನಾವು ಎಚ್ಚರಿಕೆ ವಹಿಸಬೇಕಾಗಿದೆ ಪೋಲಿಯೋ ಮುಕ್ತ ಬಲಿಷ್‌ಠ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದ ಅವರು, ಶೇ.99 ರಷ್ಟು ಪೋಲಿಯೋ ಮುಕ್ತವಾಗಿದೆ. ಉಳಿದ ಶೇ. 1ರಷ್ಟನ್ನು ಕೂಡ ತುಂಬುವಂತಹ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ: ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೆರವಿನಿಂದ ನಗರ, ಪಟ್ಟಣ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಸಲಾಗುತ್ತಿದೆ. ರೇಲ್ವೆ ಇಲಾಖೆ ಪ್ಲಾಟ್ ಫಾರಂ, ಬಸ್ ನಿಲ್ದಾಣಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆದು ಸಂಚಾರದಲ್ಲಿರುವ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಲಯನ್ಸ್ ಕ್ಲಬ್, ರೋಟರಿ ಸಂಸ್ಥೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನೆರವನ್ನೂ ಪಡೆದುಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಅಪಾರ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ಯಾಮಲಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚಿದಾನಂದ್, ಶಬ್ಬೀರ್ ಅಹಮದ್, ಕಸಾಪ ಅಧ್ಯಕ್ಷ ಎಚ್.ಎಲ್. ಜನಾರ್ಧನ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಸ್ಟೀಫನ್ ಪ್ರಕಾಶ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ ಇತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement