ಅಕ್ರಮ ಮದ್ಯ ಮಾರಾಟ: ನಾಲ್ವರ ಬಂಧನ
ಕನ್ನಡಪ್ರಭ ವಾರ್ತೆ ಹಾಸನ್ಣ ಫೆ 24
ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿದೆ.
ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ, ದೊಡ್ಡನಹಳ್ಳಿ ಗ್ರಾಮದ ವಾಸಿ ತಮ್ಮೇಗೌಡ(55) ರವರು ತಮ್ಮ ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ತಮ್ಮೇಗೌಡನ್ನು ಬಂಧಿಸಿದ್ದು, ಮದ್ಯ ಮಾರಾಟಕ್ಕಿಟ್ಟಿದ್ದ 1976 ಬೆಲೆಯ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ, ದೊಡ್ಡನಹಳ್ಳಿ ಗ್ರಾಮದ ವಾಸಿ ವಿಶ್ವನಾಥ (49) ರವರು ತಮ್ಮ ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಯಸಳೂರು ಠಾಣೆಯ ಎಎಸ್ಐ ನಿತ್ಯಾನಂದಕುಮಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ಮಾಡಿ ವಿಶ್ವನಾಥನನ್ನು ಬಂಧಿಸಿದ್ದು, ಮದ್ಯ ಮಾರಾಟಕ್ಕಿಟ್ಟಿದ್ದ 2925 ಬೆಲೆಯ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅರಕಲಗೂಡು ತಾಲೂಕಿನ ಕೊಣನೂರು ಮರಿಯಾನಗರದ ಹತ್ತಿರ ಹೊಗುತ್ತಿದ್ದಾಗ ಒಬ್ಬ ವ್ಯಕ್ತಿಯು ಹಣ ಸಂಪಾದನೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸಿದ್ದು, ಬೈಕ್ನಲ್ಲಿ ಮದ್ಯ ಸಾಗಿಸುತ್ತಿದ್ದ ಸುಮಾರು 1545 ಬೆಲೆಯ 180 ಎಂಎಲ್ನ 32 ಓರಿಜಿನಲ್ ಡಿಲಕ್ಸ್ ಸೋಪ್ ಬ್ರಾಂದಿ ಬಾಟಲಿಗಳನ್ನು ವಶಪಡಿಸಿಕೊಂಡು, ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಸಕಲೇಶಪುರ ತಾಲೂಕಿನ ಯಸಳೂರು ಗಂಗಾಧರ ಬಡಾವಣೆ ವಾಸಿ ಅನಿಲ(37) ರವರು ತಮ್ಮ ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಯಸಳೂರು ಪಿಎಸ್ಐ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅನಿಲ್ನ್ನು ಬಂಧಿಸಿದ್ದು, ಮದ್ಯ ಮಾರಾಟಕ್ಕಿಟ್ಟಿದ್ದ 963 ಬೆಲೆಯ ಮದ್ಯ ವಶಪಡಿಸಿಕೊಂಡು, ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.