ಕೆ.ಇ.ಗಿರೀಶ್ ಲಕ್ಕುಂದ ಗ್ರಾಪಂ ನೂತನ ಉಪಾಧ್ಯಕ್ಷ
ಬೇಲೂರು: ತಾಲೂಕಿನ ಬಿಕ್ಕೋಡು ಹೋಬಳಿ ಲಕ್ಕುಂದ ಗ್ರಾಮ ಪಂಚಾಯ್ತಿಯ ನೂತನ ಉಪಾಧ್ಯಕ್ಷರಾಗಿ ಕಡೆಗರ್ಜೆಯ ಕೆ.ಇ.ಗಿರೀಶ್ ಅವರು ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಲಕ್ಕುಂದ ಗ್ರಾಪಂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದ ಕಾರಣ ಉಪಾಧ್ಯಕ್ಷ ಸ್ಥಾನಕ್ಕೆ ಕಡೆಗರ್ಜೆಯ ಕೆ.ಇ. ಗಿರೀಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳಾಗಿದ್ದ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜು ಅಯ್ಯಣ್ಣನವರ್ ಅವರು ಕಡೆಗರ್ಜೆಯ ಕೆ.ಇ. ಗಿರೀಶ್ ಅವರನ್ನು ಉಪಾಧ್ಯಕ್ಷರೆಂದು ಅಧಿಕೃತವಾಗಿ ಘೋಷಿಸಿದರು. ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಕೆ.ಇ. ಗಿರೀಶ್ ಉಪಾಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಗ್ರಾಪಂ ಅಧ್ಯಕ್ಷರು ಮತ್ತು ಎಲ್ಲ ಸದಸ್ಯರು ಹಾಗೂ ಮುಖಂಡರು ಮತ್ತು ಗ್ರಾಮಸ್ಥರುಗಳಿಗೆ ಅಬಿನಂದಿಸಿದರು.