ಮಾ.1ರಂದು ಜೆಡಿಎಸ್ ಕಾನೂನು ವಿಭಾಗದ ಸಭೆ
ಹಾಸನ: ಜಿಲ್ಲಾ ಜೆಡಿಎಸ್ ಕಾನೂನು ವಿಭಾಗದ ವತಿಯಿಂದ ಮಾ.1ರಂದು ಜಿಲ್ಲಾ ಜೆಡಿಎಸ್ ಕಾನೂನು ವಿಭಾಗದ ಸಭೆಯು ನಡೆಯಲಿದೆ ಎಂದು ಜಿಲ್ಲಾ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಭೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉದ್ಘಾಟಿಸಲಿದ್ದಾರೆ. ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ, ಶಾಸಕರಾದ ಎಚ್.ಎಸ್. ಪ್ರಕಾಶ್, ಎಚ್.ಕೆ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಪಂ ಅಧ್ಯಕ್ಷೆ ಅಂಬಿಕಾ ರಾಮಾಣ್ಣ, ಉಪಾಧ್ಯಕ್ಷ ಬಿಳಿ ಚೌಡಯ್ಯ, ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ, ಮಾಜಿ ಶಾಸಕರಾದ ಎ.ಟಿ. ರಾಮಸ್ವಾಮಿ ಮತ್ತು ಬಿ.ವಿ. ಕರೀಗೌಡ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾವಗಲ್ ರಾಜಶೇಖರ್, ಕಾರ್ಯಾಧ್ಯಕ್ಷ ಚನ್ನವೀರಪ್ಪ, ಮುಖಂಡರಾದ ಕೆ.ಎಂ. ರಾಜೇಗೌಡ, ಹಿರಿಯ ವಕೀಲ ಎಂ.ಜಿ. ದೊಡ್ಡೇಗೌಡ ಹಾಗೂ ಪಕ್ಷದ ಇತರೆ ಮುಖಂಡರು ಭಾಗವಹಿಸಲಿದ್ದಾರೆ. ತಾಲೂಕು ಮಟ್ಟದಲ್ಲಿ ಕಾನೂನು ವಿಭಾಗದ ಸಭೆಗಳನ್ನು ನಡೆಸಿದ್ದು, ಇದೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಕಾನೂನು ಸಭೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲು ಅನುಕೂಲವಾಗುವ ರೀತಿಯಲ್ಲಿ ನಮ್ಮ ವಿಭಾಗದಿಂದ ಕಾರ್ಯನಿರ್ವಹಿಸುವಂತೆ ಕೆಲಸ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ವಕೀಲರಾದ ವಿಶ್ವನಾಥ್, ಲಿಂಗರಾಜು, ಜಯರಾಂ, ಶೇಷಾದ್ರಿ, ಬಿ. ಚಂದ್ರಶೇಕರ್, ಚೆನ್ನಂಗಿಹಳ್ಳಿ ಶ್ರೀಕಾಂತ್ ಇದ್ದರು.