ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಚೆನ್ನಕೇಶವ ದೇವಾಲಯಕ್ಕೆ ನಾನಾ ಸೌಲಭ್ಯ

Rashmi Kasaragodu
Updated On : 27 Feb 2014, 1:14 am

ಹಾಸನ: ಜಿಲ್ಲೆಯ ಜಗತ್ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳವಾದ ಬೇಲೂರಿನ ಚೆನ್ನಕೇಶವ ದೇವಾಲಯಕ್ಕೆ ಬರುವ ರಸ್ತೆ ಗುಂಡಿ ಬಿದ್ದಿರುವುದು, ಪ್ರವಾಸಿಗರ ವಾಹನ ನಿಲುಗಡೆ ವ್ಯವಸ್ಥೆ, ಬೊರ್‌ವೆಲ್ ರಿಪೇರಿ ಮಾಡಿಸುವುದು, ದೇವಸ್ಥಾನದ ಕಸ ಹಾಕಲು ಪಡೆದಿರುವ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದು, ಕುಡಿವ ನೀರಿನ ವ್ಯವಸ್ಥೆಗಳಿಂದ ಪ್ರವಾಸಿಗರು ಅನುಭವಿಸುತ್ತಿರುವ ನರಕಯಾತನೆ ಬಗ್ಗೆ ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವ  ಆರ್.ವಿ. ದೇಶಪಾಂಡೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಾನ ಪರಿಷತ್‌ನಲ್ಲಿ ನಿಯಮ 330 ರಡಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರೇಕ್ಷಣೀಯ ಸ್ಥಳಕ್ಕೆ ಆಗಮಿಸುತ್ತಿರುವ ದೇಶಿ ಹಾಗೂ ವಿದೇಶಿ ಪ್ರವಾಸಿಗರು ನರಕಯಾತನೆ ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಆದಾಗ್ಯೂ ಬೇಲೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೋಟೇಲ್ ಮಯೂರ ವೇಲಾಪುರಿ ವಸತಿ ಗೃಹವನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ನಡೆಸಲಾಗುತ್ತಿದ್ದು, ಇದರಲ್ಲಿ ಪ್ರವಾಸಿಗರಿಗೆ ವಸತಿಗೃಹ, ಸ್ನಾನ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಪ್ರವಾಸೋದ್ಯಮ ಇಲಾಖೆಯಿಂದ 2 ಶೌಚಾಲಯ ಹಾಗೂ ಕೇಂದ್ರ ಪುರಾತತ್ವ ಇಲಾಖೆ ವತಿಯಿಂದ ಒಂದು ಶೌಚಾಲಯ ನಿರ್ಮಿಸಿ ಪ್ರವಾಸಿಗರಿಗೆ ಕಲ್ಪಿಸಲಾಗಿದೆ. ದೇವಾಲಯದ ವ್ಯಾಪ್ತಿಯಲ್ಲಿ ವಾಸುದೇವ ತೀರ್ಥ ಕಲ್ಯಾಣಿ ಬಳಿ ಕೇಂದ್ರ ಪುರಾತತ್ವ ಇಲಾಖೆಯಿಂದ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement