ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ
ಹಾಸನ: ಮಾಜಿ ಪ್ರಧಾನಿ, ಹಾಸನ ಲೋಕಸಭಾ ಸದಸ್ಯ, ಜಿಲ್ಲಾ ಜಾಗೃತಿ,ಉಸ್ತುವಾರಿ ಸಮಿತಿ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 1ರಂದು ಬೆ.11ಕ್ಕೆ ಜಿಪಂ ಹೊಯ್ಸಳ ಸಭಾಂಗಣದಲ್ಲಿ 2013-14ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೇಂದ್ರ ನಾನಾ ಪುರಸ್ಕೃತ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಜಾಗೃತಿ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.