ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಇಂದು ಪ್ರೌಢಶಾಲೆ ಬಡ್ತಿ ಪಡೆದ ಸಹ ಶಿಕ್ಷಕರ ತುರ್ತುಸಭೆ

Rashmi Kasaragodu
Updated On : 28 Feb 2014, 1:01 am

ಹೊಳೆನರಸೀಪುರ: ಪ್ರಾಥಮಿಕ ಶಾಲೆಗಳಿಂದ ಬಡ್ತಿ ಪಡೆದು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಹತ್ತು ಹಲವು ಸಮಸ್ಯೆಗಳನ್ನು ಕುರಿತು ಚರ್ಚಿಸಲು ಅಖಿಲ ಕರ್ನಾಟಕ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ಪಡೆದ ಸಹ ಶಿಕ್ಷಕರ ಸಂಘವು ಫೆ.28 ರಂದು ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳ ಸಂಘದ ಪದಾಧಿಕಾರಿಗಳ ತುರ್ತು ಸಭೆ ಕರೆಯಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ  ಟಿ.ಆರ್. ಧವರ್‌ರಾಜ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವ ತಿಳಿಸಿದ್ದಾರೆ.
  ಈ ಕುರಿತಂತೆ ಮಾಹಿತಿ ನೀಡಿದ ಅವರುಗಳು, ಪ್ರಾಥಮಿಕ ಶಾಲೆಗಳಿಂದ ಬಡ್ತಿ ಪಡೆದು, ಪ್ರೌಢಶಾಲೆಗಳಲ್ಲಿ ಸಹ ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದುವರೆವಿಗೂ ಯಾವುದೇ ಪರಿಹಾರಗಳು ದೊರೆಯದಿರುವ ಕಾರಣದಿಂದ ಇಲಾಖೆಯು ಕಾಲ ಕಾಲಕ್ಕೆ ನೀಡುವ ಬಡ್ತಿಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.
  ಮೊದಲಾದ ಹತ್ತು ಹಲವು ಸವಾಲುಗಳನ್ನು ಎದುರಿಸುತ್ತಿರುವ ಬಡ್ತಿ ಪಡೆದ ಪ್ರೌಢಶಾಲಾ ಶಿಕ್ಷಕರುಗಳ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಫೆ.28 ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವ ತಿಳಿಸಿದರು. ಆದ್ದರಿಂದ ಸಂಘದ ಪದಾಧಿಕಾರಿಗಳು ತಪ್ಪದೇ ಸಕಾಲದಲ್ಲಿ ಸಭೆಗೆ ಹಾಜರಾಗುವಂತೆ ಸಂಘದ ತಾಲೂಕು ಪದಾಧಿಕಾರಿಗಳು ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement