ಜಿಲ್ಲಾ ಮಟ್ಟದ ಜಾಗೃತಿ, ಉಸ್ತುವಾರಿ ಸಮಿತಿ ಸಭೆ
ಹಾಸನ: ಮಾಜಿ ಪ್ರಧಾನಿ ಹಾಸನ ಲೋಕಸಭಾ ಸದಸ್ಯ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 1ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ 2013-14ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಕೇಂದ್ರ ವಿವಿಧ ಪುರಸ್ಕೃತ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.