ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಶಿಸ್ತು, ಪರಿಸರ ಪ್ರಜ್ಞೆಗೆ ಸ್ಕೌಟ್ಸ್- ಗೈಡ್ಸ್ ಶಿಬಿರ ಸಹಕಾರಿ'

Rashmi Kasaragodu
Updated On : 28 Feb 2014, 11:37 am

ಸಕಲೇಶಪುರ: ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಪರಿಸರ ಪ್ರಜ್ಞೆ ಬೆಳೆಸಲು ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಶಿಬಿರಗಳು ಸಹಾಯಕ ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ಗುರಪ್ಪಗೌಡ ಹೇಳಿದರು.
ತಾಲೂಕಿನ ಕ್ಯಾನಹಳ್ಳಿ ಗ್ರಾಮದಲ್ಲಿ ಪಟ್ಟಣದ ಪಯೋನೀರ್ ಪಬ್ಲಿಕ್ ಇಂಗ್ಲೀಷ್ ಶಾಲೆ ಆಯೋಜಿಸಿದ್ದ ಎರಡು ದಿನದ ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ವಿದ್ಯಾರ್ಥಿಗಳ ಶಿಬಿರವಾಸ ಮತ್ತು ಚಾರಣ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಸಾ.ಸು ವಿಶ್ವನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಂದೆ ತಾಯಿಗಳು ತಮ್ಮ ಮಕ್ಕಳ ಬಗ್ಗೆ ಅತೀ ವ್ಯಾಮೋಹ ಬೆಳೆಸಿಕೊಂಡು ಮಕ್ಕಳಲ್ಲಿ ಆತ್ಮ ವಿಶ್ವಾಸ ಮತ್ತು ಮನೋಸ್ಥೈರ್ಯ ಕ್ಷೀಣಿಸಲು ಪರೋಕ್ಷವಾಗಿ ಕಾರಣವಾಗಿದ್ದಾರೆಂದು ಅಭಿಪ್ರಾಯಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಇಂತಹ ಶಿಬಿರ ವಾಸಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅನುಭವ ನೀಡುತ್ತವೆ ಎಂದರು. ಗ್ರಾಮದ ಅರಣ್ಯ ಸಮಿತಿ ಅಧ್ಯಕ್ಷ ಚಂದ್ರೇಗೌಡ, ಬೀರಲಿಂಗೇಶ್ವರ ಸೇವಾಸಮಿತಿ ಅಧ್ಯಕ್ಷ ಯೋಗಾನಂದ, ಎಸ್‌ಡಿಎಂಸಿ ಅಧ್ಯಕ್ಷೆ ನಾಗರತ್ನ, ಕೆ.ಕೆ. ಶಿವಪ್ಪಗೌಡ, ಅಣ್ಣಪ್ಪ ಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement