ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕೃಷಿಯಲ್ಲಿ ತಂತ್ರಜ್ಞಾನದ ಬಗ್ಗೆ ಪ್ರಚಾರ ಅಗತ್ಯ

Mainashree
Updated On : 1 Jan 2014, 11:02 am

ಸಕಲೇಶಪುರ: ಕೃಷಿಯಲ್ಲಿ ಅವಿಷ್ಕಾರಗೊಂಡಿರುವ ಆಧುನಿಕ ತಂತ್ರಜ್ಞಾನಗಳ ಬಗ್ಗೆ ಹೆಚ್ಚಿನ ಪ್ರಚಾರದ ಅಗತ್ಯವಿದೆ ಎಂದು ಯಸಳೂರು ಗ್ರಾಪಂ ಅಧ್ಯಕ್ಷ ದೇವೇಂದ್ರ ಹೇಳಿದ್ದಾರೆ.
ಮಂಗಳವಾರ ಯಸಳೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ವಿನಾಯಕ ರೈತರ ಕೂಟದ ಆಶ್ರಯದಲ್ಲಿ ಏರ್ಪಡಿಸಿದ್ದ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಹೆಚ್ಚಿರುವ ಕೃಷಿ ಖರ್ಚನ್ನು ಕಡಿಮೆ ಮಾಡಿ, ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಇಳವರಿ ಪಡೆಯಲು ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ ಅಗತ್ಯ.
 ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ರೈತರಿಗೆ ಅನುಕೂಲವಾಗುವ ಮಾಹಿತಿಗಳನ್ನು ಒದಗಿಸಲು ಗ್ರಾಮೀಣ ಪ್ರದೇಶದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷೆ ತಸೀನ್ರಾಜ್ ಮಾತನಾಡಿ, ರೈತರಿಗೆ ಲಾಭದಾಯಕ ಉದ್ಯಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮಾರ್ಗದರ್ಶನದ ಅವಶ್ಯಕತೆ ಇದೆ. ಈ ಕುರಿತು ಸರ್ಕಾರ ಹೆಚ್ಚಿನ ಅದ್ಯತೆ ನೀಡಬೇಕು ಎಂದರು.
ಕಾಫಿ ಮಂಡಳಿ ಅಧಿಕಾರಿ ಸತೀಶ್ ಹಾಗೂ ಹೈನುಗಾರಿಕೆಯ ಬಗ್ಗೆ ಡಾ. ಬಾದಾಮಿ ಮಾಹಿತಿ ನೀಡಿದರು. ಯಸಳೂರು ಠಾಣೆ ಸಹಾಯಕ ಠಾಣಾಧಿಕಾರಿ ನಿತ್ಯಾನಂದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement