'ಜಿಲ್ಲಾ ಕಾಂಗ್ರೆಸ್ನಲ್ಲಿ ಭಿನ್ನಮತ'
ಹಾಸನ: ಜಿಲ್ಲೆಯ ಮುಖಂಡರು ಪರಸ್ಪರ ಟೀಕೆ, ಟಿಪ್ಪಣೆ, ಆರೋಪ- ಪ್ರತ್ಯಾರೋಪ ಮಾಡುತ್ತಿರುವುದು ಪಕ್ಷಕ್ಕೆ ಒಳಿತಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿ.ಎ. ಜಗನ್ನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದ ಕೆಲ ಮುಖಂಡರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾ ವಿರುದ್ಧ ಸಭೆ ನಡೆಸಿ ಆರೋಪ ಮಾಡಿದ್ದು ಮತ್ತು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿವರಾಂ ಅವರು ಸುದ್ದಿಗೋಷ್ಠಿ ನಡೆಸಿದ್ದು, ಪಕ್ಷದಿಂದ ಕೆಲವರನ್ನು ಅಮಾನತು ಮಾಡುವ ನಿರ್ಣಯ ತೆಗೆದುಕೊಂಡಿದ್ದು ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಪಕ್ಷಕ್ಕೆ ಒಳಿತಲ್ಲ. ಪಕ್ಷದಲ್ಲಿ ಭಿನ್ನಭಿಪ್ರಾಯವಿದ್ದರೇ ಅದನ್ನು ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಅವರು ಕಿವಿಮಾತು ಹೇಳಿದರು.
ವೀರಶೈವರಿಗೆ ಟಿಕೆಟ್ ನೀಡಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ವೀರಶೈವ ಅಭ್ಯರ್ಥಿಯನ್ನು ಕಣಕ್ಕಿಸಬೇಕು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಡೆದ ಕೆಪಿಸಿಸಿ ಉಪ ಸಮಿತಿ ಸಭೆಯಲ್ಲಿ ಹಾಸನದಿಂದ ವೀರಶೈವ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದು ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದೆ. ಆದ್ದರಿಂದ ವೀರಶೈವ ಸಮಾಜದ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡ ಯೋಗಾನಂದ ಹಾಗೂ ಇತರರು ಇದ್ದರು.