ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಕುವೆಂಪು ಜನ್ಮ ದಿನಾಚರಣೆ ಸುದೈವ'

Mainashree
Updated On : 2 Jan 2014, 10:17 am

ಹೊಳೆನರಸೀಪುರ: ರಾಷ್ಟ್ರಕವಿ ಕುವೆಂಪು ಅವರ 109 ನೇ ಜನ್ಮ ದಿನಾಚರಣೆ ಆಚರಿಸುತ್ತಿರುವುದು ಸುದೈವ ಎಂದು ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ತಿಳಿಸಿದರು.
ಪಟ್ಟಣದ ಕೋಟೆ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ತಾಲೂಕು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಇತ್ತೀಚೆಗೆ ಆಯೋಜಿಸಿದ್ದ ಕುವೆಂಪು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಕುವೆಂಪು ಅವರ ವಿಚಾರಧಾರೆಯನ್ನು ಶಾಲಾ ಮಕ್ಕಳು ಅನುಸರಿಸುವಂತೆ ಮಾಡುತ್ತಿರುವ ಕೆಲಸ ಅತ್ಯಮೋಘ.
 ಜೊತೆಗೆ ಈ ಸಂದರ್ಭದಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಿ ಸೇವೆ ಸಲ್ಲಿಸಿರುವ ಮಹನೀಯರುಗಳನ್ನು ಗೌರವಿಸಿ, ಸನ್ಮಾನಿಸುತ್ತಿರುವ ರೀತಿ ಉತ್ತಮ ಎಂದು ಪ್ರಶಂಶಿಸಿದರು.
ಸಮಾರಂಭದಲ್ಲಿ ನಗರಠಾಣೆ ಪಿಎಸ್‌ಐ ಶಿವಕುಮಾರ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕುಮಾರ್, ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಉಮೇಶ್, ಟಿ.ಕೆ. ಧರ್ಮರಾಜು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ತಾಲೂಕು ಬಿಜಿವೈಎಸ್ ಸಮಿತಿ ಅಧ್ಯಕ್ಷ ಉಮೇಶ್ ಮಾತನಾಡಿ, ತಾಲೂಕು ಜ್ಞಾನ ವಿಜ್ಞಾನ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಿಕ್ಷಕ ದಿವಾಕರ್ ಅವರಿಗೆ ಶುಭ ಹಾರೈಸಿದರು. ಸಮಾರಂಭ ಆರಂಭಕ್ಕೆ ಮುನ್ನ ಕುವೆಂಪು ಅವರ 109ನೇ ಜನ್ಮ ದಿನಾಚರಣೆ ಪ್ರಯುಕ್ತ 109 ವಿದ್ಯಾರ್ಥಿನಿಯರ ಪ್ರಾರ್ಥನೆ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. ಕಾರ್ಯಕ್ರಮವನ್ನು ಶಿಕ್ಷಕ  ರೇವಣ್ಣಚಾರ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement