ಜಿಲ್ಲೆಯ ಪ್ರಮುಖ ಇಲಾಖೆಗಳಲ್ಲಿ ಬಹುತೇಕ ಹುದ್ದೆ ಖಾಲಿ
ಕ.ಪ್ರ. ವಾರ್ತ್ಣೆ ಹಾಸನ್ಣ ಜ.3
ಜಿಲ್ಲೆಯ ಆರೋಗ್ಯ, ಸಮಾಜ ಕಲ್ಯಾಣ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಂತಹ ಮಹತ್ತರ ಇಲಾಖೆಗಳಲ್ಲಿ ಶೇಕಡ 50ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಇದರಿಂದ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಕುಮಾರ ನಾಯಕ್ ವಿಷಾದಿಸಿದ್ದಾರೆ.
ಸೂಚನೆ: ಈ ಬಗ್ಗೆ ವಾಸ್ತವಾಂಶವನ್ನು ಸರ್ಕಾರಕ್ಕೆ ಸಲ್ಲಿಸಲು ಪ್ರಸ್ತಾವನೆ ತಯಾರಿಸಿ ನೀಡುವಂತೆ ಸಂಬಂಧಪಟ್ಟ ಇಲಾಖಾಕಾರಿಗಳು ನೀಡಬೇಕು. ಜಿಲ್ಲೆಯಲ್ಲಿ ನಾನಾ ಇಲಾಖೆಗಳಿಗೆ ನಿಗಗೊಳಿಸಲಾಗಿರುವ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಅಂಕಿ ಅಂಶಗಳೊಂದಿಗೆ ಕ್ರೋಡೀಕೃತ ವರದಿಯನ್ನು ಸಹ ನೀಡಬೇಕೆಂದು ಶುಕ್ರವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಿದರು.
ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಸ್ಥಳಕ್ಕೆ ತೆರಳಿ, ಕಾರ್ಯಕ್ರಮದ ಪ್ರಗತಿ ಹಂತಗಳನ್ನು ವಾರಕ್ಕೊಮ್ಮೆ ಪರಿಶೀಲಿಸಿ ವರದಿ ನೀಡುವಂತೆ ತಾಕೀತು ಮಾಡಿದರು.
ಎಚ್ಚರ ವಹಿಸಿ: ಸಮಾಜ ಕಲ್ಯಾಣ ಇಲಾಖೆಗೆ ಬಿಡುಗಡೆಯಾಗುವ ಅನುದಾನವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಶಾಖೆ ಹೆಚ್ಚಿನ ಗಮನ ವಹಿಸಿ, ವಾರದೊಳಗಾಗಿ ಎಲ್ಲಾ ವಿಧದ ಅನುದಾನವನ್ನು ಸಂಬಂಧಪಟ್ಟ ಅಕಾರಿಗಳಿಗೆ ಬಿಡುಗಡೆ ಮಾಡಬೇಕು. ಇಲಾಖೆಯ ಹಾಸ್ಟೆಲ್ಗಳ ವ್ಯವಸ್ಥೆ, ಕಟ್ಟಡಗಳ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ಕಾಪಾಡಬೇಕು. ವಿದ್ಯಾರ್ಥಿ ನಿಲಯಗಳಿಗೆ ಕನಿಷ್ಠ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖಾ ವತಿಯಿಂದ ನಿರ್ಮಾಣ ಹಂತದಲ್ಲಿರುವ ಮುರಾರ್ಜಿ ದೇಸಾಯಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ಹಾಗೂ ಇತರೆ ವಸತಿ ಶಾಲೆಗಳ ನಿರ್ಮಾಣದ ಗುಣಮಟ್ಟ ಪರಿಶೀಲಿಸಿ ಇದರಲ್ಲಿ ಸಾಕಷ್ಟು ಸೌಲಭ್ಯಗಳು ವಿದ್ಯಾರ್ಥಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸೂಚನೆ: ಕೃಷಿ ಹಾಗೂ ತೋಟಗಾರಿಕಾ ಇಲಾಖೆಗಳಲ್ಲೂ ಮಳೆ ಅಭಾವದಿಂದ ಬೆಳೆ ನಷ್ಠ ಹಾಗೂ ಪರಿಹಾರದ ಬಗ್ಗೆ ಪರಿಶೀಲಿಸಿ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ ಹೆಚ್ಚು ಬೆಳೆ ನಷ್ಟ ಸಂಭವಿಸಿದೆ. ಈ ಬಗ್ಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವುದರೊಂದಿಗೆ, ಬೆಳೆ ನಷ್ಟದ ಅಂದಾಜು ತಯಾರಿಸುವಂತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯದರ್ಶಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲಿಸಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇದರ ಪರಿಹಾರಕ್ಕಾಗಿ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಂಡು ಹುದ್ದೆಗಳ ಭರ್ತಿಗಾಗಿ ಪ್ರಸ್ತಾಪ ಸಲ್ಲಿಸಿದಲ್ಲಿ ಇದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಆಹಾರ ಪೂರೈಸುವ ಘಟಕಗಳಿಗೆ ಸಂಬಂಧಪಟ್ಟ ಅಕಾರಿಗಳು ಖುದ್ದು ಭೇಟಿ ನೀಡಿ ಆಹಾರದ ಗುಣಮಟ್ಟವನ್ನು ಪರಿಶೀಲಿಸುವಂತೆ ತಿಳಿಸಿದರು.
ದಾಖಲೆಗಳನ್ನು ಕಾಪಾಡಬೇಕು: ಗ್ರಾಮೀಣ ಅಭಿವೃದ್ಧಿ ಇಲಾಖೆ, ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ವಿವಿಧ ಯೋಜನೆಯಡಿ ಅವಕಾಶವಿದ್ದು, ಗುಣಮಟ್ಟದ ರಸ್ತೆ ಅಭಿವೃದ್ಧಿಗೆ ಶ್ರಮಿಸುವಂತೆ ಹಾಗೂ ಸಕಾಲಕ್ಕೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ ಅವರು ಸಮಾಜ ಕಲ್ಯಾಣ ಇಲಾಖೆ ಮೂಲಕ ಪರಿಶಿಷ್ಟ ಜಾತಿ ವರ್ಗದವರ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಸಹಾಯಧನವನ್ನು ಫಲಾನುಭವಿಗಳಿಗೆ ನೇರವಾಗಿ ವಿತರಣೆಯಾಗಬೇಕು ಹಾಗೂ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಾಪಾಡಬೇಕು ಎಂದರು. ಜಿಲ್ಲಾ ಪಂಚಾಯಿತಿ ಮೂಲಕ ಅನುಷ್ಠಾನಗೊಳ್ಳುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಸರಿಯಾಗಿ ಕಾರ್ಯಗತವಾಗುತ್ತಿರುವ ಬಗ್ಗೆ ಹಾಗೂ ಇದರ ಪ್ರಯೋಜನ ಫಲಾನುಭವಿಗಳಿಗೆ ದೊರೆಯುತ್ತಿರುವ ಬಗ್ಗೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕೆಂದು ಸೂಚಿಸಿದರು.
ವಿವಿಧ ಇಲಾಖೆಗಳಲ್ಲಿ ಜಾರಿಗೊಳಿಸಿರುವ ಯೋಜನೆಗಳಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ವ್ಯವಸ್ಥಾಪಕರು ಫಲಾನುಭವಿಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಜಿಲ್ಲಾಕಾರಿಯವರು ಪ್ರಸ್ತಾಪಿಸಿದರು. ಬ್ಯಾಂಕ್ ಸಾಲ ಸೌಲಭ್ಯ ಮಂಜೂರಾತಿಯಲ್ಲಿ ನಿಯಮ ಸರಳೀಕರಣಗೊಳಿಸಿ ಸಕಾಲಕ್ಕೆ ಸಾಲ ಸೌಲಭ್ಯ ಫಲಾನುಭವಿಗಳಿಗೆ ನೀಡುವಲ್ಲಿ ಬ್ಯಾಂಕ್ ಅಕಾರಿಗಳು ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಜರುಗಿಸಲು ಸಭೆಗೆ ಆಗಮಿಸಿದ್ದ ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕರಾದ ಸಾಲಮನ್ ಮೆನೆಜಸ್ ಇವರಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಕಾರಿ ವಿ. ಅನ್ಬುಕುಮಾರ್, ಅಪರ ಜಿಲ್ಲಾಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪುಟ್ಟಸ್ವಾಮಿ ಮುಖ್ಯ ಯೋಜನಾಕಾರಿ ಪರಪ್ಪಸ್ವಾಮಿ ಹಾಗೂ ಜಿಲ್ಲೆಯ ವಿವಿಧ ಇಲಾಖಾಕಾರಿಗಳು ಹಾಜರಿದ್ದು ಸಭೆಗೆ ಅಗತ್ಯ ಮಾಹಿತಿ ಒದಗಿಸಿದರು.
ಜಿಪಂ ಮುಖ್ಯ ಯೋಜನಾಕಾರಿ ಪರಪ್ಪಸ್ವಾಮಿ ಸ್ವಾಗತಿಸಿ ಜಿಲ್ಲಾಕಾರಿ ವಿ.ಅನ್ಬುಕುಮಾರ್ ವಂದಿಸಿದರು.