ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸುದ್ದಿ ಸಂಕ್ಷೇಪ

Mainashree
Updated On : 5 Jan 2014, 11:10 am

ವಿದ್ಯಾರ್ಥಿಗಳಿಗೆ ಕ್ರಿಕೆಟ್ ಪಂದ್ಯಾವಳಿ
ಹಾಸನ: ರಾಜ್ಯ ಕ್ರಿಕೆಟ್ ಸಂಛಸ್ಥೆಯ ಶಿವಮೊಗ್ಗ ವಲಯ (ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು) ಪ್ರತಿ ವರ್ಷದಂತೆ ಈ ವರ್ಷವೂ ಪ್ರಸ್ತುತ ಸಾಲಿನಲ್ಲಿ  ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕೆಎಸ್‌ಸಿಎ ಅಂತರ ಶಾಲಾ ಕ್ರಿಕೆಟ್ ಪಂದ್ಯಾವಳಿ ನಡೆಸಲು ಇಚ್ಛಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕರು ತಿಳಿಸಿದ್ದಾರೆ. ಕೆಎಸ್‌ಸಿಎ ಅಂತರ ಶಾಲಾ ಕ್ರಿಕೆಟ್ ಪಂದ್ಯಾವಳಿಯು ಶಿವಮೊಗ್ಗ ವಲಯದಲ್ಲಿ ಇರುವ ಪ್ರೌಢಶಾಲೆಯ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ಹೆಚ್ಚಿನ ತರಬೇತಿ ಹಾಗೂ ಉನ್ನತ ದರ್ಜೆ ಕ್ರಿಕೆಟ್ ಆಟಗಾರರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಈ ಪಂದ್ಯಾವಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಪ್ರೌಢಶಾಲಾ ತಂಡದವರು ತಂಡದ ವಿವರ, ಶಾಲೆಯ ಪ್ರಾಂಶುಪಾಲರು ಅಥವಾ ಮುಖ್ಯೋಪಾಧ್ಯಾಯರ ದೃಢೀಕರಣ ಪತ್ರದೊಂದಿಗೆ ಜ. 13ರೊಳಗಾಗಿ ಸಂಚಾಲಕರಾದ ಡಿ.ಅಶೋಕ್ ಕುಮಾರ್ ಅವರಿಗೆ ತಲುಪಿಸಲು ಕೋರಲಾಗಿದೆ. ಪಂದ್ಯಾವಳಿಯ ದಿನಾಂಕವನ್ನು  ನಂತರ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗೆ ಮೊ. 9448653746 ಸಂಪರ್ಕಿಸಲು ಕೋರಲಾಗಿದೆ.
ಇಂದು ಜಿಲ್ಲಾ ಚಲನಚಿತ್ರೋತ್ಸವ
ಹಾಸನ: ನಗರದ ಭಾನು ಚಿತ್ರ ಮಂದಿರದಲ್ಲಿ ಜ. 6ರಂದು ಬೆಳಿಗ್ಗೆ 7.30ಕ್ಕೆ ಜಿಲ್ಲಾಮಟ್ಟದ ಚಲನಚಿತ್ರೋತ್ಸವವನ್ನು ವಿಧಾನ ಪರಿಷತ್ ಸದಸ್ಯರಾದ ಪಟೇಲ್ ಶಿವರಾಂ ಅವರು, ಉದ್ಘಾಟಿಸುವರು. ಶಾಸಕ ಹೆಚ್.ಎಸ್. ಪ್ರಕಾಶ್ ಅಧ್ಯಕ್ಷತೆ ವಹಿಸುವರು. ನಗರ ಸಭೆಯ ಅಧ್ಯಕ್ಷೆ ಶ್ರೀವಿದ್ಯಾ ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಗೋಪಾಲಕೃಷ್ಣ, ಚಿತ್ರಮಂದಿರಗಳ ಮಾಲೀಕರ ಸಂಘದ ಅಧ್ಯಕ್ಷ ವಾಸು, ಎಸ್. ರಮೇಶ್ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement