ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ರಸ್ತೆ ನಿಯಮ ಪಾಲನೆಗೆ ಜಾಗೃತಿ ಜಾಥಾ

Vishwanath S
Updated On : 9 Jan 2014, 1:13 am

ಕ.ಪ್ರ.ವಾರ್ತೆ ,  ಅರಸೀಕೆರೆ ,  ಜ.8
ಕರ್ನಾಟಕ ರಾಜ್ಯ ಪೊಲೀಸ್, ಹಾಸನ ಜಿಲ್ಲಾ ಅರಸೀಕೆರೆ ನಗರ ಪೊಲೀಸ್ ಠಾಣೆ ಆಶ್ರಯದಲ್ಲಿ ಮಂಗಳವಾರ ಬೆಳಗ್ಗೆ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅಪಘಾತದಿಂದ ಪಾರಾಗಿ ಎನ್ನುವ ಸಂದೇಶ ಸಾರುವ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು.
ಅಪಘಾತಕ್ಕೆ ಅವಸರವೇ ಕಾರಣ, ಅತಿವೇಗದಿಂದ  ವಾಹನ ಚಾಲನೆ ಮಾಡಬೇಡಿ, ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ವಾಹನಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಿ ಸಂಸಾರ ಉಳಿಸಿ, ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎಂಬ ಅನೇಕ ಸಂದೇಶಗಳನ್ನು ಜಾಥಾದಲ್ಲಿ ಪಾಲ್ಗೊಂಡಿದ್ದ ಬಸವರಾಜೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಿತ್ತಿ ಪತ್ರಗಳಲ್ಲಿ ಪ್ರದರ್ಶಿಸಿದರು.  ಅಲ್ಲದೇ ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆದರು. ನಗರ ಠಾಣೆಯ ಅಪರಾಧ ವಿಭಾಗದ ಇನ್‌ಸ್ಪೆಕ್ಟರ್ ಲೋಕೇಶ್ ಮಾತನಾಡಿ, ವಾಹನದಲ್ಲಿ  ಚಲಿಸುವವರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಮಾಲೀಕರಿಗೆ ವಾಹನ ಸವಾರರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ. ಅಪಘಾತ ಸಂಭವಿಸಿದ ವೇಳೆ ಪರಿಹಾರ ಪಡೆದುಕೊಳ್ಳಲು ಸಾಧ್ಯವಿದೆ. ಆದ್ದರಿಂದ ವಾಹನಗಳಿಗೆ  ಸಂಬಂಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement