ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪರಿಸರ ಸಂರಕ್ಷಣೆಗೆ ಶೌಚಾಲಯ ನಿರ್ಮಿಸಿ

Vishwanath S
Updated On : 10 Jan 2014, 12:46 pm

ಕ.ಪ್ರ.ವಾರ್ತೆ ,  ಜಾವಗಲ್ ,  ಜ.9
ಗ್ರಾಮೀಣ ಜನತೆ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡುವಂತೆ ಅರಸೀಕೆರೆ ತಾಲೂಕು ಪಂಚಾಯ್ತಿ  ಸಹಾಯಕ ನಿರ್ದೇಶಕ ಹಾಗೂ ಉದ್ಯೋಗಖಾತ್ರಿ ಯೋಜನೆಯ ನೋಡೆಲ್ ಅಧಿಕಾರಿ ಚಂದ್ರಶೇಖರ್ ತಿಳಿಸಿದರು.  ಜಾವಗಲ್ ಗ್ರಾಮ ಪಂಚಾಯ್ತಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ 2013-14ನೇ ಸಾಲಿನ 1-4-2013ರಿಂದ 30-09-2013ರ ಅರ್ಧ ವಾರ್ಷಿಕ ಅವಧಿಯ ಸಾಮಾಜಿಕ ಪರಿಶೋಧನೆ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿದರು.
ಉದ್ಯೋಗಖಾತ್ರಿ ಯೋಜನೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಸಮುದಾಯ ಕಾಮಗಾರಿಗಳಿಗಿಂತ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮುಖ್ಯವಾಗಿ ಗ್ರಾಮಗಳ ಪ್ರತಿ ಮನೆಯಲ್ಲೂ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಂಡು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.  ಪಿಡಿಓ ವಿರೂಪಾಕ್ಷಪ್ಪ ಮಾತನಾಡಿ, ವೈಯಕ್ತಿಕ ಕಾಮಗಾರಿಗಳಲ್ಲಿ ಕೃಷಿ ಅರಣ್ಯೀಕರಣ, ತೋಟಗಾರಿಕಾ ಬೆಳೆಗಳನ್ನು ಬೆಳೆಯುವುದು, ಬದಿ ನಿರ್ಮಾಣ, ಶೌಚಾಲಯ ನಿರ್ಮಾಣ ಸೇರಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ ಎಂದು ವಿವರಿಸಿದರು.
ಕಾಮಗಾರಿ ಕೈಗೊಳ್ಳುವವರು ಅಗತ್ಯವಾದ ಮಾಹಿತಿ ಮತ್ತು ದಾಖಲಾತಿಗಳನ್ನು ಗ್ರಾಮ ಪಂಚಾಯ್ತಿ ಕಚೇರಿಗೆ ಸಲ್ಲಿಸುವಂತೆ ತಿಳಿಸಿದರು. ಗ್ರಾಮಸ್ಥರ ಪರವಾಗಿ ಜೆ.ಕೆ.ಚಿಕ್ಕಯ್ಯ ಮಾತನಾಡಿ, ಪರಿಶಿಷ್ಟಜಾತಿ ಮತ್ತು ಪಂಗಡಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಗ್ರಾಪಂ ಅಧ್ಯಕ್ಷೆ ಕವಿತಾ ಮಂಜುನಾಥ್, ಉಪಾಧ್ಯಕ್ಷ ರಂಗಸ್ವಾಮಿ, ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement