ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಂಗನವಾಡಿ ಕಾರ್ಯಕರ್ತೆಯರ ಧರಣಿ

Vishwanath S
Updated On : 11 Jan 2014, 1:21 am

ಕ.ಪ್ರ.ವಾರ್ತೆ , ಅರಸೀಕೆರೆ , ಜ.10
ತಮ್ಮ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿಗೆ ತೆರಳಿ ಕೆಲಕಾಲ ಧರಣಿ ನಡೆಸಿ ತಹಶೀಲ್ದಾರ್ ಕೇಶವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗುತ್ತಾ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಿ ಜಾರಿಗೆ ತರಬೇಕು. ಅಲ್ಲಿಯವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ. ಸಂಕಷ್ಟದಲ್ಲಿರುವ ಕಾರ್ಯಕರ್ತೆಯರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.
ಆಗ್ರಹ: ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷ ಕೆ. ನೇತ್ರಾವತಿ ಪ್ರತಿಭಟನಾ ನಿರತನ್ನು ಉದ್ದೇಶಿದ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರ್ಕಾರಿ ನೌಕರರು ಎಂದು ಘೋಷಣೆ ಕನಿಷ್ಠ ವೇತನ ಜಾರಿ, ಸಿ.ಮತ್ತು ಡಿ ಗ್ರೂಪ್ ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು. ಕಾರ್ಯಕರ್ತೆಯರಿಗೆ ರು. 15 ಸಾವಿರ , ಸಹಾಯಕಿಯರಿಗೆ ರು. 12 ಸಾವಿರ ನೀಡಬೇಕು. ಪಿಂಚಣಿ ಹೆಚ್ಚಳ, ಹಿಡಿಗಂಟು ಹೆಚ್ಚಳ, ಸೇವಾ ಹಿರಿತನದ ಭತ್ಯೆ, ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಹೆಚ್ಚಿಸುವುದು, ಇ.ಎಸ್.ಐ. ಸೌಲಭ್ಯ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಸರ್ಕಾರ ಪೂರೈಸಬೇಕೆಂದು ಆಗ್ರಹಿಸಿದರು.
ಮನವಿ: ಬೇಡಿಕೆ ಈಡೇರುವವರೆಗೆ ಹೋರಾಟ ಸ್ಥಗಿತಗೊಳಿಸುವ ಪ್ರಶ್ನೇಯೇ ಇಲ್ಲ ಸರ್ಕಾರ ಕೂಡಲೇ ತಮ್ಮ ನಿಲುವು ಪ್ರಕಟಿಸಬೇಕು ಅಲ್ಲದೇ ಈಗಾಗಲೇ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗಿದೆ. ಬರುವ ಫೆ.10 ರಂದು ಬೆಂಗಳೂರಿನ ವಿಧಾನಸೌಧ ಚಲೋ ಚಳುವಳಿ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಖಜಾಂಚಿ ಶಾಂತಮ್ಮ, ಉಪಾಧ್ಯಕ್ಷರಾದ ಗಾಯತ್ರಿ, ಪ್ರೇಮ, ದಾಕ್ಷಾಯಿಣಮ್ಮ ಸೇರಿದಂತೆ ನೂರಾರು ಮಂದಿ  ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement