ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಶಿಕ್ಷಣ ಕ್ಷೇತ್ರದಲ್ಲಿ ನಿರೀಕ್ಷಿತ ಸಾಧನೆಯಾಗುತ್ತಿಲ್ಲ'

Vishwanath S
Updated On : 12 Jan 2014, 1:14 am

ಕ.ಪ್ರ.ವಾರ್ತೆ , ಬೇಲೂರು , ಜ. 11
ಸರ್ಕಾರ ಸರ್ವ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಕೋಟ್ಯಾಂತರ ರೂಗಳನ್ನು ವೆಚ್ಚ ಮಾಡಿದರೂ, ಶಿಕ್ಷಣ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧನೆಯಾಗುತ್ತಿಲ್ಲ. ಸರ್ಕಾರ ಈ ಬಗ್ಗೆ ಅತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಜಿ.ಟಿ. ಇಂದಿರಾ ಧರ್ಮಪ್ಪ ವಿಷಾದಿಸಿದರು.
ವ್ಯವಸ್ಥಿತಿ ತರಬೇತು ಬೇಕು: ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಬ್ಲಾಕ್ ಹಂತದ ಕಲಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾವಿರಾರು ಕೋಟಿ ರು. ಅನುದಾನ ಬಿಡುಗಡೆ ಮಾಡಿದರೆ ಸಾಲದು. ಮಕ್ಕಳಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಇರುವ ವ್ಯತ್ಯಾಸ ಅರಿತು ಕೆಲಸ ಮಾಡಬೇಕು ಎಂದ ಅವರು, ಶಿಕ್ಷಕರಿಗೆ ವ್ಯವಸ್ಥಿತ ತರಬೇತಿ ನೀಡಿದಾಗ ಮಾತ್ರ ಗುಣ ಮಟ್ಟದ ಶಿಕ್ಷಣ ಮಕ್ಕಳಿಗೆ ನೀಡಲು ಸಾಧ್ಯವೆಂದರು.
ಉತ್ತಮ ಕಾರ್ಯಕ್ರಮ: ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಬಿ. ಸುಂದ್ರೇಶ್ ಮಾತನಾಡಿ, ಈ ಕಲಿಕೋತ್ಸವ 2013 ಮತ್ತ 14 ಸಾಲಿನ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದೆ ಎಂದರು.
ಜಿ.ಪಂ. ಸದಸ್ಯೆ ಜಯಶೀಲಾಜಯಶಂಕರ್, ಸಿಆರ್‌ಪಿ ನಾರಾಯಣ್, ತಾಲೂಕು ಪಂಚಾಯ್ತಿ ಸದಸ್ಯೆ ಕಮಲ ಚನ್ನಪ್ಪ, ಸರ್ಕಾರಿ ನೌಕರರ ಸಂಘದ ಭದ್ರೇಗೌಡ, ಗೌಡೇಗೌಡ, ಜಗದೀಶ್, ರಂಗಸ್ವಾಮಿ, ರಾಜಕುಮಾರ್, ಮಂಜುನಾಥ್ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement