ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ರಾಷ್ಟ್ರಕವಿ ಸ್ವಾರ್ಥಕ್ಕೆ ಬಳಕೆ: ವೇಣುಗೋಪಾಲ್

Vishwanath S
Updated On : 13 Jan 2014, 1:06 am

ಕ.ಪ್ರ.ವಾರ್ತೆ ,  ಸಕಲೇಶಪುರ ,  ಜ. 12
ರಾಷ್ಟ್ರಕವಿಗಳನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಇದು ಸ್ವಾಸ್ಥ್ಯ ಸಮಾಜಕ್ಕೆ ಪೂರಕವಲ್ಲ ಎಂದು ಪ್ರಾಂಶುಪಾಲ ವೇಣುಗೋಪಾಲ್ ವಿಷಾದ ವ್ಯಕ್ತಪಡಿಸಿದ್ದಾರೆ.
ಶನಿವಾರ ಪಟ್ಟಣದ ರೋಟರಿ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಡಾ. ಜಿ. ಎಸ್. ಶಿವರುದ್ರಪ್ಪರವರ ಗೀತಾಗಾಯನ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಲ್ಲದ ರಾಷ್ಟ್ರಕವಿಗಳನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವುದು ಸುಖೀ ಸಮಾಜಕ್ಕೆ ಮಾರಕವಾಗಲಿದೆ ಎಂದರು.
ಕಾವ್ಯದಲ್ಲಿ ಸೌಂದರ್ಯವನ್ನು ಹೇಗೆ ನೋಡಬಹುದು ಎಂಬುದನ್ನು ತೋರಿಸಿ ಕೊಟ್ಟವರು ಜಿ.ಎಸ್.ಎಸ್. ಮನಸ್ಸುಗಳನ್ನು ಅರಳಿಸುವಂತಹ ಕಾವ್ಯಗಳು ಪ್ರಸ್ತುತ ಗಟ್ಟದಲ್ಲಿ ಅಗತ್ಯವಾಗಿದೆ ಎಂದು ಅಭಿಪ್ರಾಯಿಸಿದರು.
ಉಪಯುಕ್ತ: ಕಸಾಪದ ಅಧ್ಯಕ್ಷ ಎಸ್.ಎಂ ಮಂಜುನಾಥ್ ಮಾತನಾಡಿ, ಜಿಎಸ್ಸೆಸ್ ಕನ್ನಡನಾಡು ಕಂಡ ಒಬ್ಬ ಶ್ರೇಷ್ಠ ಬರಹಗಾರರಲ್ಲಿ ಒಬ್ಬರು. ಅವರ ಸಾಹಿತ್ಯಗಳು ಇಂದಿನ ಸಮಾಜಕ್ಕೆ ಅತ್ಯಂತ ಉಪಯುಕ್ತವಾದವು. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ ಎಂದರು.
ಅವಶ್ಯ: ರೋಟರಿ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ಮಾತನಾಡಿ, ತಮ್ಮ ಕಾವ್ಯಗಳಲ್ಲಿ ಭಾವನೆಗಳಿಗೆ ಹೆಚ್ಚು ಒತ್ತು ಕೊಟ್ಟ ಜಿಎಸೆಸ್ ಅವರ ಕಾವ್ಯಗಳು ಎಂದೆಂದಿಗೂ ಅಜರಾಮರ. ವಿದ್ಯಾರ್ಥಿಗಳು ಅವರ ಕೃತಿಗಳನ್ನು ವಿದ್ಯಾರ್ಥಿ ಜೀವನದಲ್ಲಿ ತಿಳಿದುಕೊಳ್ಳುವುದು ಅವಶ್ಯ ಎಂದರು.
ಗೀತಗಾಯನ ಸ್ಪರ್ಧೆಯಲ್ಲಿ ನಾನಾ ಶಾಲೆಗಳ ಮಕ್ಕಳು ಭಾಗವಹಿಸಿದ್ದರು. ವೇದಿಕೆಯಲ್ಲಿ ಕಸಾಪ ನಿಕಟಪೂರ್ವ ಅಧ್ಯಕ್ಷ ರಕ್ಷಿದಿ ಪ್ರಸಾದ್, ಕಾರ್ಯದರ್ಶಿ ಪ್ರಸನ್ನಕುಮಾರ್, ಉಪಾದ್ಯಕ್ಷೆ ಶಾರದ ಗುರುಮೂರ್ತಿ ಚೇತನ್, ಮೀನಾಕ್ಷಿ ಖಾದರ್ ಮತ್ತು ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement