ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜೆಡಿಎಸ್ ಸಮಾವೇಶಕ್ಕೆ ಜಿಲ್ಲೆಯಿಂದ 20 ಸಾವಿರ ಮಂದಿ

Vishwanath S
Updated On : 16 Jan 2014, 1:32 am

ಬೇಲೂರು: ಜ.17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಸಮಾವೇಶಕ್ಕೆ ಹಾಸನ ಜಿಲ್ಲೆಯಿಂದ 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರ ಹಾಗೂ ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಜೆಡಿಎಸ್ ತನ್ನ ಶಕ್ತಿ ಪ್ರದರ್ಶಿಸಲಿದ್ದು ಈ ಮೂಲಕ ಕಾರ್ಯಕರ್ತರ ಸಂಘಟನೆ ಮಾಡುವುದು ಹಾಗೂ ದೇಶದಲ್ಲಿ ಮುಂದಿನ ದಿನಗಳಲ್ಲಿ ತೃತೀಯ ರಂಗ ರಚನೆಯ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ಈಗಾಗಲೇ ದೇಶದಲ್ಲಿ ರಾಷ್ಟ್ರಿಯ ಪಕ್ಷಗಳ ಶಕ್ತಿ ಕುಗ್ಗುತ್ತಿದ್ದು ಪ್ರಾದೇಶಿಕ ಪಕ್ಷಗಳು ಮುಂಚೂಣಿಯಲ್ಲಿವೆ.  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ನಮ್ಮ ರಾಷ್ಟ್ರಿಯ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಅಭ್ಯರ್ಥಿಯಾಗಲಿ ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದು, ಅವರೇ ಅಭ್ಯರ್ಥಿಯಾಗಲಿದ್ದಾರೆ ಎಂದರು.
ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ತಾಪಂ ಮಾಜಿ ಅಧ್ಯಕ್ಷ ಎಂ.ಎ.ನಾಗರಾಜು, ಜಿಪಂ ಸದಸ್ಯ ಚಂದ್ರೇಗೌಡ, ಜಿಪಂ ಮಾಜಿ ಸದಸ್ಯ ಸಿ.ಎಸ್.ಪ್ರಕಾಶ್, ಮುಖಂಡರಾದ ಕೆ.ಎಸ್.ಲಿಂಗೇಶ್, ಚಿನ್ನೇನಹಳ್ಳಿ  ಗಂಗೇಶ್, ನಟರಾಜು, ಎಪಿಎಂಸಿ ಸದಸ್ಯ ಸಿ.ಎನ್.ಮಹೇಶ್, ಸೋಮಣ್ಣ, ಪುರಸಭೆ ಸದಸ್ಯರಾದ ಶ್ರೀನಿಧಿ, ಚನ್ನಕೇಶವ, ರವಿ, ಬಿ.ಗಿರೀಶ್, ಯುವ ಮುಖಂಡ ಚಿದಾನಂದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement