ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸುತ್ತೂರು ಜಾತ್ರೆ ಪ್ರಚಾರ ರಥ ಆಗಮನ

Vishwanath S
Updated On : 16 Jan 2014, 1:32 am

ಹೊಳೆನರಸೀಪುರ: ಮೈಸೂರು ಜಿಲ್ಲೆಯ ಸುತ್ತೂರು ಶ್ರೀಕ್ಷೇತ್ರದಲ್ಲಿ ಜ.27ರಿಂದ ಫೆ.1ರವರೆಗೆ ನಡೆಯಲಿರುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರಚಾರ ರಥಯಾತ್ರೆಯು ಮಂಗಳವಾರ ಪಟ್ಟಣಕ್ಕೆ ಆಗಮಿಸಿತು.
ರಥಯಾತ್ರೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಪದಾಧಿಕಾರಿಗಳು ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವ ಕುರಿತಂತೆ ವಿವರ ನೀಡಿದ ಮಹಾಸಭಾದ ಅಧ್ಯಕ್ಷ ಎಚ್.ಎನ್.ಕುಮಾರಸ್ವಾಮಿ ಅವರು, ಜಾತ್ರಾ ಮಹೋತ್ಸವದ ಅಂಗವಾಗಿ ಕರ್ತೃಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆಯುವ ಜೊತೆಗೆ, ವಿದ್ಯುಕ್ತವಾಗಿ ಸಾಮೂಹಿಕ ವಿವಾಹ, ವಸ್ತುಪ್ರದರ್ಶನ, ಕೃಷಿ ಮೇಳ, ದನಗಳ ಜಾತ್ರೆ, ದೇಸಿ ಆಟಗಳು, ಮಕ್ಕಳ ಚಿತ್ರಕಲಾ ಸ್ಪರ್ಧೆ, ಭಜನಾ ಮೇಳ, ರಂಗೋಲಿ ಸ್ಪರ್ಧೆ ಸೇರಿದಂತೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ ಎಂದರು.
ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಾಗವಹಿಸುವ ಲಕ್ಷಾಂತರ ಭಕ್ತಾಧಿಗಳಿಗೆ ಎಲ್ಲ ದಿನಗಳಲ್ಲಿಯೂ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಭಕ್ತಾಧಿಗಳ ವಾಸ್ತವ್ಯಕ್ಕೆ ಎಲ್ಲ ಶಾಶ್ವತ ವಸತಿ ವ್ಯವಸ್ಥೆಗಳ ಜೊತೆಗೆ ಸಾವಿರಾರು ಮಂದಿಗೆ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಕಾರ್ಯದರ್ಶಿ ವೈ.ವಿ.ಚಂದ್ರಶೇಖರ್ ಮಾತನಾಡಿ, ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಡಿನ ಪೂಜ್ಯ ಮಠಾಧೀಶರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು, ಶಾಸಕರು, ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಕಲಾವಿದರು ಪಾಲ್ಗೊಳ್ಳಲಿರುವುದಾಗಿ ತಿಳಿಸಿದರು.
ವೀರಶೈವ ಸಮುದಾಯದ ಬಾಂಧವರಾದ ಎಲ್‌ಐಸಿ ಬಸಪ್ಪ, ಉಪನ್ಯಾಸಕರಾದ ಎಚ್.ಎಸ್.ಪ್ರಭುಶಂಕರ್, ವೈ.ಆರ್.ಶಿವಾನಂದ, ವಕೀಲರಾದ ರಾಜಶೇಖರ್, ರಾಜು, ಪ್ರಕಾಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement