ಜಾವಗಲ್ನಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ
ಜಾವಗಲ್: ಜಾವಗಲ್ ಹೋಬಳಿಯಾದ್ಯಂತ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಭಾನುವಾರ ಯಶಸ್ವಿಯಾಗಿ ನಡೆಯಿತು.
ಜಾವಗಲ್, ನೇರ್ಲಿಗೆ, ಕೋಳಗುಂದ, ಹಂದ್ರಾಳು, ಉಂಡಿಗನಾಳು, ಕಲ್ಯಾಡಿ, ಕರಗುಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಕುರಾದಹಳ್ಳಿ, ಅರಕೆರೆ ಆಯುರ್ವೇದಿಕ್ ಆಸ್ಪತ್ರೆಗಳ ವ್ಯಾಪ್ತಿಯ ಎಲ್ಲಾ ಬೂತ್ಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆದು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಯಿತು.
ಜಾವಗಲ್ ಬಸ್ ನಿಲ್ದಾಣದಲ್ಲಿ ಗ್ರಾಪಂ ಅಧ್ಯಕ್ಷೆ ಕವಿತಾ ಮಂಜುನಾಥ್ ಅವರು ಮಗುವಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆ ಮಾಡಬಹುದಾಗಿದೆ ಎಂದರು.
ಡಾ. ಗೀತಾ, ಸಾರಿಗೆ ಸಂಸ್ಥೆ ಸಂಚಾರ ನಿಯಂತ್ರಕ ಜಿ.ಸಿ. ರಾಜಶೇಖರ್, ಗ್ರಾಪಂ ಮಾಜಿ ಸದಸ್ಯ ಜೆ.ಸಿ. ಹನುಮೇಗೌಡ, ಸುಧಾಕರ್, ರಜನಿಕಾಂತ್ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜಾವಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 20 ಬೂತ್ಗಳ ವ್ಯವಸ್ಥೆ ಮಾಡಲಾಗಿತ್ತು.