ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

13 ನಕಲಿ ಪರೀಕ್ಷಾರ್ಥಿಗಳಿಗೆ ಜಾಮೀನು

Rashmi Kasaragodu
Updated On : 22 Jan 2014, 1:27 am

ಹೊಳೆನರಸೀಪುರ: ಇಲ್ಲಿನ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಸೋಮವಾರದಂದು ಪೂರಕ ಪರೀಕ್ಷೆ ಬರೆಯುತ್ತಿದ್ದ ಖಾಸಗಿ ಐಟಿಐ ಕಾಲೇಜಿನ 22ನಕಲಿ ವಿದ್ಯಾರ್ಥಿಗಳನ್ನು ಬಂಧಿಸಿದ ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು, ಬಂಧಿತ ವಿದ್ಯಾರ್ಥಿಗಳನ್ನು ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿ, 13 ವಿದ್ಯಾರ್ಥಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದರೆ, ಇನ್ನುಳಿದ 9 ವಿದ್ಯಾರ್ಥಿಗಳನ್ನು ಬಾಲಾಪರಾಧ ಕಾಯ್ದೆಯಡಿಯಲ್ಲಿ ಹಾಸನದ ಬಾಲ ನ್ಯಾಯ ಮಂಡಳಿಯ ವಶಕ್ಕೆ ಒಪ್ಪಿಸಲಾಗಿದೆ.
ಪೂರಕ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಕೊಠಡಿಯ ಮೇಲ್ವಿಚಾರಕರು ವಿದ್ಯಾರ್ಥಿಯೊಬ್ಬನ ಮೇಲೆ ಅನುಮಾನಗೊಂಡು ದೂರು ನೀಡಿದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದ ಸ್ಥಳೀಯ ಪರೀಕ್ಷಾ ಮಂಡಳಿಯ ಅಧ್ಯಕ್ಷ ಸೈಯದ್ ಅಮಾನುಲ್ಲಾ ಹಾಗೂ ಪರೀಕ್ಷಾ ಕೇಂದ್ರದ ಅಧೀಕ್ಷಕ ಮಂಜುನಾಥ್ ಅವರ ವಿದ್ಯಾರ್ಥಿಗಳ ದಾಖಲಾತಿಗಳನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗಿ, ಪರೀಕ್ಷೆ ಬರೆಯುತ್ತಿದ್ದ 22 ವಿದ್ಯಾರ್ಥಿಗಳ ಪೈಕಿ ಅಷ್ಟೂ ವಿದ್ಯಾರ್ಥಿಗಳು ನಕಲಿ ವಿದ್ಯಾರ್ಥಿಗಳೆಂಬ ಆಘಾತಕಾರಿ ವಿಷಯ ಹೊರಬಿದ್ದಿತ್ತು.
ಇದೇ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾಗಿದ್ದವರೊಬ್ಬರು, ಪರೀಕ್ಷಾ ಆಕ್ರಮಗಳಿಗೆ ಸಹಕಾರ ನೀಡಿರುವ ಆರೋಪಗಳು ಇವೆ.
ಇಲ್ಲಿನ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪ್ರತಿ ಬಾರಿಯೂ ನಡೆಯುವ ಪರೀಕ್ಷೆಗಳಲ್ಲಿ ಸಾಕಷ್ಟು ಆಕ್ರಮಗಳು ನಡೆಯುತ್ತಿರುವುದಾಗಿ ಆರೋಪಗಳು ಕ್ರಮೇಣ ಸಾರ್ವಜನಿಕರಿಂದ ಹೊರಬೀಳತೊಡಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೂ ಆದ ಎಸ್ಪಿ ರವಿ ಡಿ.ಚನ್ನಣ್ಣನವರ್ ಅವರು ಈ ಪ್ರಕರಣವನ್ನು ಖುದ್ದಾಗಿ ತಾವೇ ತನಿಖೆ ನಡೆಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವರೆಂಬ ಆಶಯವನ್ನು ನಾಗರಿಕರು ವ್ಯಕ್ತಪಡಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement