ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪ್ರತಿಭಟನೆಯಲ್ಲಿ ಅಸ್ವಸ್ಥಗೊಂಡ ರೈತ ಹೋರಾಟಗಾರ

Rashmi Kasaragodu
Updated On : 22 Jan 2014, 1:24 am

ಬೇಲೂರು: ಪಟ್ಟಣದ ತಾಲೂಕು ಕಚೇರಿ ಮುಂಭಾಗ ಯಗಚಿ ಏತ ನೀರಾವರಿ ಕಾಮಗಾರಿ ವಿಳಂಬದ ಬಗ್ಗೆ ಯಗಚಿ ಹೋರಾಟ ಸಮಿತಿ, ತಾಲೂಕು ರೈತ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 2 ದಿನಕ್ಕೆ ಕಾಲಿಟ್ಟಿದ್ದು ಹೋರಾಟ ಸಮಿತಿ ಉಪಾಧ್ಯಕ್ಷ ಕೆ.ಪಿ. ಕುಮಾರ್ ಅಸ್ವಸ್ಥರಾಗಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ಬೆಳಗ್ಗೆ ಆರಂಭಗೊಂಡ ಪ್ರತಿಭಟನೆಯ ಕಾವು ಮಂಗಳವಾರವೂ ಮುಂದುವರೆದಿದೆ. ಯಗಚಿ ಹೋರಾಟ ಸಮಿತಿಯ ಉಪಾಧ್ಯಕ್ಷ ಕುಮಾರ್ ಅವರಿಗೆ ಸೋಮವಾರ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ವೈದ್ಯರು ನೀಡಿದ ಚಿಕಿತ್ಸೆಗೆ ಅವರ ದೇಹ ಸ್ಪಂದಿಸುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಡಾ. ನರಸೇಗೌಡ ತಿಳಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement