ಫೆ. 16ಕ್ಕೆ ನವೋದಯ ಆಡಳಿತ ಮಂಡಳಿ ಚುನಾವಣೆ
ಚನ್ನರಾಯಪಟ್ಟಣ: ಪಟ್ಟಣದ ಸ್ವಾತಂತ್ರ್ಯ ಪೂರ್ವ ವಿದ್ಯಾ ಸಂಸ್ಥೆಯಾದ ನವೋದಯ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಗೆ ಫೆ. 16ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿಯಾಗಿ ನಿಯೋಜನೆಗೊಂಡಿರುವ ಪ್ರೊ. ಎಚ್. ಸಿದ್ದೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವೋದಯ ವಿದ್ಯಾ ಸಂಸ್ಥೆಗೆ ಫೆ. 16ರಂದು ನಡೆಯಲಿರುವ ಚುನಾವಣೆಯಲ್ಲಿ 2083 ಮಂದಿ ಮತ ಚಲಾವಣೆ ಮಾಡಲಿದ್ದು, ಮತದಾನಕ್ಕಾಗಿ 5 ಬೂತ್ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. 1944ರಲ್ಲಿ ಪ್ರಾರಂಭವಾದ ಸಂಸ್ಥೆಗೆ ಚುನಾವಣೆ ಮುಖೇನ ಆಡಳಿತ ಮಂಡಳಿ ಸದಸ್ಯರನ್ನು ಆಯ್ಕೆ ಮಾಡಲಿದ್ದು, ಜ. 27ರಂದು ಮತದಾರರ ಪಟ್ಟಿಯನ್ನು ವಿದ್ಯಾ ಸಂಸ್ಥೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು.
'ಕಡಿಮೆ ಶುಲ್ಕದಲ್ಲಿ ಉತ್ತಮ ವಿದ್ಯಾಭ್ಯಾಸ ನೀಡಬೇಕು'
ಬೇಲೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳು ಕಡಿಮೆ ಶುಲ್ಕದಲ್ಲಿ ಉತ್ತಮ ವಿದ್ಯಾಭ್ಯಾಸವನ್ನು ನೀಡುವಂತಾಗಬೇಕು ಎಂದು ಚಿಕ್ಕಬಳ್ಳಾಪುರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ್ ತಿಳಿಸಿದರು.
ಕಾಲೇಜಿಗೆ ಕೀರ್ತಿ: ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವ ಹಾಗೂ ವಿವೇಕಾನಂದರ ಜಯಂತಿ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವ ದೃಷ್ಟಿಯಿಂದ 1985ರಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯನ್ನು ತಾಲೂಕಿನಲ್ಲಿ ಸ್ಥಾಪಿಸಿ ಶಿಕ್ಷಣ ವಂಚಿತ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಪ್ರವೇಶ ಕಲ್ಪಿಸಿದ ಕೀರ್ತಿ ವಿವೇಕಾನಂದ ಕಾಲೇಜಿಗೆ ಸಲ್ಲುತ್ತದೆ ಎಂದರು.