ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಕ್ರಮ ಮದ್ಯ: ಮೂವರ ಬಂಧನ

Rashmi Kasaragodu
Updated On : 23 Jan 2014, 1:34 am

ಹಾಸನ: ಜಿಲ್ಲೆಯ ನಾನಾ ಕಡೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದು, ರು. 5,559 ಬೆಲೆಯ ಮದ್ಯ ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ, ಕುಟುಕುಮಂಟಿ ಕಾವಲು ಗ್ರಾಮದ ಹತ್ತಿರ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ನಾನಾ ಮಾದರಿಯ ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಮಾರಾಟಮಾಡುತ್ತಿದ್ದಾಗ ಕೊಣನೂರು ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ  ದಾಳಿ ನಡೆಸಿ ಲೋಹಿತ (29) ಎಂಬವರನ್ನು ಬಂಧಿಸಿದ್ದು, ಮದ್ಯ ಮಾರಾಟಕ್ಕಿಟ್ಟಿದ್ದ ಸುಮಾರು ರು. 650 ನಗದು ಸೇರಿ ರು. 2389 ಬೆಲೆಯ 90 ಎಂಎಲ್ಣನ ಓರಿಜಿನಲ್ ಡಿಲಕ್ಸ್ ವಿಸ್ಕಿಯ 30 ಬಾಟಲಿಗಳು, 180 ಎಂಎಲ್ನ ಓರಿಜಿನಲ್ ಚಾಯ್ಸ್ ವಿಸ್ಕಿ ಮತ್ತು ರಮ್ಬಾಟಲಿಗಳನ್ನು ಮತ್ತು ಟೆಟ್ರಾ ಪ್ಯಾಕೇಟ್ಗಳು ಹಾಗೂ ಇತರೆ ನಾನಾ ಮಾದರಿಯ ಮದ್ಯ ಬಾಟಲಿಗಳನ್ನು ವಶಪಡಿಸಿಕೊಂಡು, ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಬಂಧನ: ಮತ್ತೊಂದು ಪ್ರಕರಣದಲ್ಲಿ ಶಾಂತಿಗ್ರಾಮ ಠಾಣಾ ವ್ಯಾಪ್ತಿ ಕಾರೇಕೆರೆ ಗೇಟ್ ಹತ್ತಿರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶಾಂತಿಗ್ರಾಮ ಠಾಣೆ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿ ಮದ್ಯ ಮಾರಾಟ ಮಾಡುತ್ತಿದ್ದ ದೇವರಾಜ (35) ಎಂಬವರನ್ನು ಬಂಧಿಸಿದ್ದು, ಮದ್ಯ ಮಾರಾಟಕ್ಕಿಟ್ಟಿದ್ದ ರು. 2000 ಬೆಲೆಯ 180 ಎಂಎಲ್ನ 40 ಓರಿಜಿನಲ್ ಚಾಯ್ಸ್ ಟೆಟ್ರಾ ಪ್ಯಾಕೇಟ್ಗಳನ್ನು ವಶಪಡಿಕೊಂಡು, ಶಾಂತಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.



ಕೆಸಗೋಡು ಗ್ರಾಮದಲ್ಲೂ ಬಂಧನ
ಇನ್ನೊಂದು ಪ್ರಕರಣದಲ್ಲಿ ಬೇಲೂರು ತಾಲ್ಲೂಕು, ಬಿಕ್ಕೋಡು ಹೋಬಳಿ, ಕೆಸಗೋಡು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಅರೇಹಳ್ಳಿ ಠಾಣೆ ಬಂದ ಮಾಹಿತಿ ಮೇರೆಗ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವಿಶ್ವನಾಥ (40) ಎಂಬವರನ್ನು ಬಂಧಿಸರಿದ್ದು, 1170 ರು.ಬೆಲೆಯ 180 ಎಂಎಲ್ನ ಓರಿಜಿನಲ್ ಚಾಯ್ಸ್ ಡಿಲೆಕ್ಸ್ ವಿಸ್ಕಿ 20 ಮದ್ಯದ ಪ್ಯಾಕೇಟ್ಗಳು ಮತ್ತು 90 ಎಂಎಲ್ನ ಸಿಲ್ವರ್ಕಪ್ ಬ್ರಾಂದಿ 10 ಮದ್ಯದ ಪೌಚುಗಳನ್ನು ವಶಪಡಿಸಿಕೊಂಡು, ಅರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement