ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಿಐ ವರ್ಗಾವಣೆಗಾಗಿ ಪ್ರತಿಭಟನೆ

Rashmi Kasaragodu
Updated On : 23 Jan 2014, 1:30 am

ಸಕಲೇಶಪುರ: ಆರಕ್ಷಕ ವೃತ್ತ ನಿರೀಕ್ಷಕ ಗುರುರಾಜ್ ವರ್ಗಾವಣೆಗೆ ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳ ಮುಖಂಡರು ಅಹೋರಾತ್ರಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.
ಮಂಗಳವಾರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆಗೆ ಸಜ್ಜಾಗಿದ್ದ ಮುಖಂಡರನ್ನು ದೂರವಾಣಿಯಲ್ಲಿ ಸಂಪರ್ಕಿಸಿದ ಪೊಲೀಸ್ ವರಿಷ್ಠಾಧಿಕಾರಿ ಪಟ್ಟಣಕ್ಕೆ ಆಗಮಿಸಿ, ದೂರು ಆಲಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದೆ ಪಡೆಯಲಾಗಿತ್ತು. ಆದರೆ, ಪ್ರವಾಸಿಮಂದಿರದ ಸಮೀಪ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿ ಮಾಡಲು ಸಂಜೆವರೆಗೆ ಕಾದುಕುಳಿತರೂ ಪಟ್ಟಣಕ್ಕೆ ಅವರು ಆಗಮಿಸದ ಹಿನ್ನೆಲೆಯಲ್ಲಿ ಆಹೋರಾತ್ರಿ ಪ್ರತಿಭಟನೆ ನಿರ್ಧರಿಸಲಾಗಿದೆ.       
ಘಟನೆಯ ಹಿನ್ನೆಲೆ: ಸೋಮವಾರ ಪಟ್ಟಣದ ಹೆದ್ದಾರಿಯಲ್ಲಿ  ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಹಿಂದುಪರ ಸಂಘಟನೆಯ ಮುಖಂಡರೊಂದಿಗೆ ವಾಗ್ವಾದಕ್ಕಿಳಿದ ಜಾನುವಾರು ಸಾಗಣೆಗಾರರು ಪರಸ್ಪರ ಹೊಡೆದಾಡಿಕೊಂಡು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಗೆ ಆಗಮಿಸಿದ ವೃತ್ತನಿರೀಕ್ಷಕ ಗುರುರಾಜ್ ಹಿಂದೂ ಸಂಘಟನೆಯ ಮುಖಂಡರನ್ನು ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೆ ದೂರು ದಾಖಲಿಸುವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಮುದಾಯವೊಂದರ ಬಗ್ಗೆ ಸರ್ಕಲ್ ಇನ್ಸ್ಪೆಕ್ಟರ್ ಗುರುರಾಜ್ ಅವರು ಕೇವಲವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಗುರುರಾಜ್ ಅವರು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement