ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ
ಹಾಸನ: ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ. 25ರಂದು ಭಾರತೀಯ ಚುನಾವಣಾ ಆಯೋಗವು ನಿಗದಿಪಡಿಸಿದ ಕ್ರಮಗಳಂತೆ ಮುಖ್ಯ ಚುನಾವಣಾಧಿಕಾರಿಯವರು ನೀಡಿದ ನಿರ್ದೇಶನಗಳನ್ನು ಅನುಸರಿಸಿ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದೆ.
ಈ ಸಂಬಂಧ ಜ.25ರಂದು ಬೆಳಗ್ಗೆ 9ಕ್ಕೆ ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಯುವ ಮತದಾರರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ. ಹೆಚ್.ಎನ್. ಗೋಪಾಲಕೃಷ್ಣ ಕೋರಿದ್ದಾರೆ.