ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಟ್ಕಾ: 7 ಮಂದಿ ಬಂಧನ

Rashmi Kasaragodu
Updated On : 24 Jan 2014, 2:09 am

ಹಾಸನ: ಜಿಲ್ಲೆಯ ನಾನಾ ಪ್ರಕರಣದಲ್ಲಿ ಮಟ್ಕಾ ಜೂಜಾಡುತ್ತಿದ್ದ 7 ಮಂದಿಯನ್ನು ಬಂಧಿಸಿ, ಅವರಿಂದ 3695 ರು.ಗಳ ನಗದನ್ನು ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಕಾಳನಕೊಪ್ಪಲು ಗ್ರಾಮದ ಗಂಗಾ ನಗರ ಸಮೀಪವಿರುವ ಲಾರಿ ಗುಡ್ಡದ ಹಲಸಿನ ಮರದ ಕೆಳಗೆ ಸಾರ್ವಜನಿಕರ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದರು. ಗ್ರಾಮಾಂತರ ಠಾಣೆಯ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿ ಜೂಜಾಡುತ್ತಿದ್ದ ಮಲ್ಲಿಕ (30), ಸಿದ್ದೇಶ್ (38) ಮತ್ತು ಚಿನ್ನಸ್ವಾಮಿ (20) ಎಂಬವರನ್ನು ಬಂಧಿಸಿದ್ದು, ಪಣಕ್ಕಿಟ್ಟಿದ್ದ ಸುಮಾರು ರು. 1,740 ನಗದನ್ನು ವಶಪಡಿಸಿಕೊಂಡಿದ್ದು, ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಹಾಸನದ ಸಾಲಗಾಮೆ ರಸ್ತೆ, ಅರಳಿಕಟ್ಟೆ ವಣತ್ತದ ಹತ್ತಿರ ಸಾರ್ವಜನಿಕರ ಸ್ಥಳದಲ್ಲಿ ರು. 1ಗೆ, ರು. 80 ರೂಪಾಯಿ ಕೊಡುವುದಾಗಿ ಸಾರ್ವಜನಿಕರನ್ನು ವಂಚಿಸುವ ಉದ್ದೇಶದಿಂದ ಮಟ್ಕಾ ಜೂಜಾಟಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮಟ್ಕಾ-ಜೂಜಾಡುತ್ತಿದ್ದ ಚರಿ ಮತ್ತು ರಂಗನಾಥ ಎಂಬವರನ್ನು ಬಂಧಿಸಿದ್ದು, ಮಟ್ಕಾ-ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 1,670 ರು. ನಗದನ್ನು ವಶಪಡಿಸಿಕೊಂಡು, ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಹಾಸನದ ಈದ್ಗಾ ವೃತ್ತದ ಸಾರ್ವಜನಿಕ ಸ್ಥಳದಲ್ಲಿ ರು. 1ಗೆ, ರು. 80 ಕೊಡುವುದಾಗಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಖಲೀಲಾ (36) ಎಂಬಾತನನ್ನು ಬಂಧಿಸಿದ್ದು, ಮಟ್ಕಾ ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು ರು. 80 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಹಾಸನದ ಚಿಕ್ಕನಾಳು ವೃತ್ತದ ಸಾರ್ವಜನಿಕರ ಸ್ಥಳದಲ್ಲಿ ರು. 1, ರು. 80 ಕೊಡುವುದಾಗಿ ಸಾಛ್ಗಿಜನಿಕರನ್ನು ವಂಚಿಸುತ್ತಿದ್ದ ಅಮದ್ ಪಾಷ ಎಂಬಾತನನ್ನು ಬಂಧಿಸಿದ್ದು, ಮಟ್ಕಾ-ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 205 ರು. ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ನಾಪತ್ತೆ
ಹಾಸನ: ನಗರದ ಹಾಸನದ ರಾಘವೇಂದ್ರ ಕಾಲೋನಿ ಬೀರನಹಳ್ಳಿ ಕೆರೆ ವಾಸಿ ಮಲ್ಲೇಶ ರವರ ಪುತ್ರಿ ರುಕ್ಮಿಣಿ (22) ಮನೆಯಿಂದ ಹೊರಗೆ ಹೋದವಳು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಚಹರೆ: 4.5 ಅಡಿ ಎತ್ತರ ಎಣ್ಣೆಗೆಂಪು ದುಂಡುಮುಖ, ಸಾಧಾರಣ ಮೈಕಟ್ಟು, ಕನ್ನಡ ಮತ್ತು ಮರಾಠಿ ಭಾಷೆ ಮಾತನಾಡುತ್ತಾಳೆ. ತಾಯಿ ಮರುಗಮ್ಮ ರವರು ಕೊಟ್ಟ ದೂರಿನ ಮೇರೆಗೆ ಹಾಸನ ಬಡಾವಣೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ವ್ಯಕ್ತಿ ನಾಪತ್ತೆ
ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಹೋಬಳಿ, ಕೆಂಬಾಳು ಗ್ರಾಮದ ಮಹೇಶ (48) ರವರು ಪೋಸ್ಟ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು, ಮನೆಯಿಂದ ಹೊರಗಡೆ ಹೋದವರು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಚಹರೆ: 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕನ್ನಡ ಬಾಷೆ ಮಾತನಾಡುತ್ತಾರೆ. ಪತ್ನಿ ಶ್ಯಾಮಲ ಅವರು ನುಗ್ಗೇಹಳ್ಳಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement