ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ
ಹಾಸನ: ರಾಜ್ಯ ಸರ್ಕಾರವು ಅತ್ಯುನ್ನತ ಸೇವೆಗೈದ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆ ರೂಪಿಸಿದೆ.
ಜ. 10ರಂದು ನಡೆದ ಮೌಲ್ಯಮಾಪನ ಸಮಿತಿ ಸಭೆಯಲ್ಲಿ ಹಾಸನ ಜಿಲ್ಲಾ ಮಟ್ಟದಲ್ಲಿ ಈ ವರ್ಷದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಚನ್ನರಾಯಪಟ್ಟಣ ತಾಲೂಕು ತಹಸೀಲ್ದಾರ್ ಡಾ.ಹೆಚ್.ಎನ್. ನಾಗರಾಜ್, ಚನ್ನರಾಯಪಟ್ಟಣದ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಎ.ಇ. ಧರ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿ. ಗೀತಾ, ಪ್ರವಾಸೋದ್ಯಮ ಇಲಾಖೆಯ ಸ್ವಾಗತಕಾರ ತಮ್ಮಣ್ಣಗೌಡ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಶಿವರಾಜ್, ತೋಟಗಾರಿಕೆ ಇಲಾಖೆ ತೋಟಗಾರಿಕಾ ಉಪನಿರ್ದೇಶಕ ಶಕೀಲ್ ಅಹಮದ್ ಆಯ್ಕೆಯಾಗಿದ್ದಾರೆ.